3:20 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುತ್ತದೆ: ಶಾಸಕ ಡಾ. ಭರತ್ ಶೆಟ್ಟಿ

24/12/2025, 22:04

ಸುರತ್ಕಲ್(reporterkarnataka.com): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶ ಭಾಷಣ ಮಸೂದೆ ಕರಾಳ ಮುಖವನ್ನು ಹೊಂದಿದ್ದು ಸಾಮಾಜಿಕ ಜಾಲತಾಣ ಸೇರಿದಂತೆ, ಪತ್ರಕರ್ತರು, ದೇಶಭಕ್ತಿಯ ಘೋಷಣೆ ಮೊಳಗಿಸುವವರನ್ನು, ಹಿಂದೂ ಧರ್ಮದ ದೇವರ ಹೆಸರನ್ನು ಘೋಷಣೆ ಮಾಡುವವರನ್ನು ಕೂಡ ಬಿಡದೆ ಕೇಸು ದಾಖಲಿಸಿ ನೇರವಾಗಿ ಜೈಲಿಗೆ ಕಟ್ಟುವ ಅಧಿಕಾರವನ್ನು ಪೊಲೀಸರಿಗೆ ಕೊಡಲಾಗಿದೆ. ಯಾವುದೇ ಪ್ರತಿಭಟನೆಗೆ, ಇಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಬರುವ ಪ್ರಮುಖ ದಿಕ್ಸೂಚಿ ಭಾಷಣಗಾರರನ್ನು ಕಾರ್ಯಕ್ರಮ ನಡೆಯುವ ಮುನ್ನವೇ ಪೊಲೀಸರು ಕೇಸು ದಾಖಲಿಸಿ ಬಾರದಂತೆ ತಡೆಯಲು ಸ್ವಾತಂತ್ರ್ಯ ನೀಡಲಾಗಿದೆ. ಇದೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಒಂದು ವರ್ಗವನ್ನು ಸಂತುಷ್ಟಗೊಳಿಸುವ ಕಾಯಿದೆಯಾಗಿದ್ದು ಇದನ್ನು ಬಿಜೆಪಿ ಪಕ್ಷ ವಿರೋಧಿಸುತ್ತಲೇ ಬರುತ್ತದೆ ಎಂದು ಘೋಷಿಸಿದರಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಈ ಕಾಯ್ದೆ ಬಳಕೆಯಾದರೆ ಅವರ ಜೊತೆಯಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು. ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ದಿನಕರ್ ಇಡ್ಯಾ, ಸುನಿಲ್ ಕುಳಾಯಿ,ನಿಕಟ ಪೂರ್ವ ಜನಪ್ರತಿನಿದಿಗಳು ಬಿಜೆಪಿ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತರು, ಮತ್ತು ಸಾರ್ವಜನಿಕರೂ ಉಪಸ್ಥಿತರಿದ್ದರು. ಪುಷ್ಪರಾಜ್ ಮುಕ್ಕಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು