ಇತ್ತೀಚಿನ ಸುದ್ದಿ
ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ: ಬಸ್ಸಿಗೆ ಟ್ರಕ್ ಡಿಕ್ಕಿ; 20ಕ್ಕೂ ಅಧಿಕ ಮಂದಿ ಸಜೀವ ದಹನ
25/12/2025, 10:17
ಬೆಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 48ರ ಹಿರಿಯೂರು ತಾಲೂಕಿನ ಗೊರ್ಲತ್ ಕ್ರಾಸ್ ಬಳಿ ಗುರುವಾರ ಮುಂಜಾನೆ ಖಾಸಗಿ ಸ್ಲೀಪರ್ ಕೋಚ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.
ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆ 8 ಗಂಟೆ ವೇಳೆಗೆ ಬಸ್‌ನಿಂದ ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ರಕ್ ಡಿವೈಡರ್ ಹಾರಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.












