ಇತ್ತೀಚಿನ ಸುದ್ದಿ
ದತ್ತಪೀಠದಿಂದ ಹಿಂತಿರುಗುತ್ತಿದ್ದಾಗ ಜೀಪ್ ಪಲ್ಟಿ: ಪುತ್ತೂರಿನ 7 ಮಂದಿ ಪ್ರವಾಸಿಗರಿಗೆ ಗಾಯ
26/12/2025, 12:48
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ದ.ಕ. ಜಿಲ್ಲೆಯ ಪುತ್ತೂರಿನ ಪ್ರವಾಸಿಗರು ಗಾಯಗೊಂಡಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ಮೂಲದ ಪ್ರವಾಸಿಗರು
ಪುತ್ತೂರಿನಿಂದ ಜೀಪ್ ನಲ್ಲಿಯೇ ಏಳು ಮಂದಿ ಪ್ರವಾಸಿಗರು ಆಗಮಿಸಿದ್ದರು.
ದತ್ತಪೀಠಕ್ಕೆ ಬಂದಿದ್ದು,ಹಿಂತಿರುಗವಾಗ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಬಳಿ ಈ ದುರ್ಘಟನೆ ನಡೆದಿದೆ.
ಗಾಯಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಕುಡೊಂಕಿನ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಪಲ್ಟಿಯಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













