11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

26/12/2025, 19:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಟುಂಬದೊಂದಿಗೆ ಕಾರಿನಲ್ಲಿ ಪ್ರವಾಸ ತೆರಳುತ್ತಿದ್ದ ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಕಾರಿಗೆ ‘ಪೊಲೀಸ್‌’ ನಾಮಫಲಕ ಹಾಕಿಕೊಂಡಿದ್ದಕ್ಕೆ ಸ್ಥಳೀಯ ಪೊಲೀಸರು ಅವರಿಗೆ ದಂಡ ವಿಧಿಸಿದ ಘಟನೆ ಕೊಟ್ಟಿಗೆಹಾರದ ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.
ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಖಾಸಗಿ ವಾಹನದ ಮುಂಭಾಗಕ್ಕೆ ‘ಪೊಲೀಸ್’ ಎಂಬ ನಾಮ ಫಲಕ ಹಾಕಿ ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬದೊಂದಿಗೆ ಪ್ರವಾಸ ತೆರಳುತ್ತಿದ್ದರು. ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಬಣಕಲ್ ಸಬ್‌ ಇನ್‌ಸ್ಪೆಕ್ಟರ್ ರೇಣುಕಾ ಹಾಗೂ ಸಿಬ್ಬಂದಿ ಆ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
ಕರ್ತವ್ಯದಲ್ಲಿ ಇಲ್ಲದ ಸಂದರ್ಭದಲ್ಲಿ ಪೊಲೀಸ್ ನಾಮ ಫಲಕ ಅಳವಡಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ನಿಯಮ ಉಲ್ಲಂಘಿಸಿದ ಅಧಿಕಾರಿಗೆ ದಂಡ ವಿಧಿಸಿ, ಫಲಕವನ್ನು ತೆರವು ಮಾಡಿ ಕಳುಹಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು