12:16 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ

27/12/2025, 09:13

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

2026ರ ಹೊಸ ವರ್ಷದ ಆಚರಣೆಗೆ ಜಿಲ್ಲೆಗೆ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದು, ಪ್ರವಾಸಿಗರು ತಂಗುವ ಹೋಂ-ಸ್ಟೇ, ರೆಸಾರ್ಟ್, ಹೋಟೆಲ್-ಲಾಡ್ಜ್‍ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು.
ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸ ಪಾಸ್‍ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‍ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು.
ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು.ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸುವುದು.ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಅಳವಡಿಸುವುದು. ಸಿಸಿಟಿವಿ ಅಳವಡಿಸುವುದು, ಸಿ.ಸಿ ಟಿವಿಯ 45 ದಿನಗಳ ಫೂಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾಗೂ “ನೀವು ಸಿಸಿಟಿವಿ ಕಣ್ಗಾವಲಿನಲ್ಲಿರುತ್ತೀರಿ” ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸುವುದು.
ಯಾವುದೇ ಅಹಿತಕರ ಘಟನೆ ಅಥವಾ ತಪ್ಪುಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಸರ್ಕಾರದ ಗಮನಕ್ಕೆ ತರತಕ್ಕದ್ದು, ಇಲ್ಲವಾದಲ್ಲಿ ಮಾಲೀಕರನ್ನೇ ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮಕೈಗೊಳ್ಳುವುದು.ಯಾವುದೇ ಮಾದಕ ವಸ್ತುಗಳು ಹಾಗೂ ಮದ್ಯಪಾನ ಇತ್ಯಾದಿಗಳಿಗೆ ಅವಕಾಶ ನೀಡದಂತೆ ಕ್ರಮವಹಿಸುವುದು. ಕಡ್ಡಾಯವಾಗಿ ಒಣತ್ಯಾಜ್ಯ ಹಾಗೂ ಹಸಿ ತ್ಯಾಜ್ಯಗಳ ಸಂಗ್ರಹಣೆಗೆ ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡುವುದು.ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ 2 ಲೀಟರ್‍ಗಳಿಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಿದ್ದು, ಅದರಂತೆ ಸೂಕ್ತ ಕ್ರಮ ವಹಿಸುವುದು.
ದಯವಿಟ್ಟು ಯಾವುದೇ ಪ್ರವಾಸಿಗರು ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಪ್ರೋತ್ಸಾಹಿಸಬಾರದು. ತುರ್ತು ಸಮಯದಲ್ಲಿ 24*7 ಕಾರ್ಯನಿರ್ವಹಿಸುವ ದೂರವಾಣಿ ಸಂಖ್ಯೆ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ 08272-221077, 08272-221099, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ 9480804900, 08272-228330 ನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು