7:43 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಹೆಜಮಾಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಮಹಿಳೆಯರ ಬಂಧನ

27/12/2025, 19:38

ಉಡುಪಿ(reporterkarnataka.com): ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ(40) ಬಂಧಿತ ಆರೋಪಿಗಳು. ಹೆಜಮಾಡಿಯ ಕಮಲ(78) ಎಂಬವರು ಡಿ.24ರಂದು ಮನೆಯ ಬಳಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸಕ್ಕೆ ಹೋಗಿದ್ದರು. ದೈವದ ದರ್ಶನ ಮಾಡಿ ನಂತರ ಅಲ್ಲಿಗೆ ಬಂದ ತನ್ನ ಶಾರದಾ ಪೂಜಾರಿ ಎಂಬವರು ಕಮಲ ಅವರ ಕುತ್ತಿಗೆಯಲ್ಲಿ ಚಿನ್ನದ ಸರ ಇಲ್ಲದೆ ಇರುವ ಬಗ್ಗೆ ತಿಳಿಸಿದರು.


ಡಿ.25ರಂದು ಸಂಜೆ ದೇವಸ್ಥಾನದ ಆಡಳಿತ ಮಂಡಳಿಯವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಕಮಲ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನಕ್ಕೆ ಬಾರದೆ ಕುತ್ತಿಗೆಯಲ್ಲಿದ್ದ ಸುಮಾರು 3 ಪವನ್ ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದರಂತೆ ತನಿಖೆ ನಡೆಸಿದ ಪೊಲೀಸರು,ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು