ಇತ್ತೀಚಿನ ಸುದ್ದಿ
ಹುಣಸೂರು ಜ್ಯುವೆಲ್ಲರಿ ದರೋಡೆ ಪ್ರಕರಣ: ಆರೋಪಿಗಳು ಮಂಗಳೂರು ಕಡೆಗೆ ಪರಾರಿ ಶಂಕೆ
30/12/2025, 09:51
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದೆ.




ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಚಿನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ. ದರೋಡೆಕೋರರು
ಮಡಿಕೇರಿ, ಮಂಗಳೂರು ಕಡೆಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.












