10:24 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಡಿಪು ಶಾಖೆ: ಉಚಿತ ನೇತ್ರ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ

30/12/2025, 21:53

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಡಿಪು ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರ್ನಾಡು ಘಟಕ ಇವರ ಜಂಟಿ ಸಹಯೋಗದೊಂದಿಗೆ ಮಂಗಳೂರಿನ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ನ ನುರಿತ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರವು ಮುಡಿಪು ಗೋಪಾಲಕೃಷ್ಣ ಸಭಾಗೃಹ ಅಮ್ಮೆಂಬಳ ಜರುಗಿತು.
ಕಾರ್ಯಕ್ರಮವನ್ನು ಕುರ್ನಾಡ್ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಪ್ರೇಮಾರವರು ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರ್ನಾಡು ಘಟಕದ ಅಧ್ಯಕ್ಷರಾದ ಶ್ರೀಮತಿ ಮಮತಾ ಅವರು ಮಾತನಾಡಿ, ಗ್ರಾಮೀಣ ಪ್ರದೇಶ ಹಾಗೂ ಹಿಂದುಳಿದ ನಗರ ಪ್ರದೇಶಗಳಲ್ಲಿ ಇಂತಹ ಶಿಬಿರ ಆಯೋಜನೆ ಮಾಡುವಂತಹದ್ದು ತುಂಬಾ ಒಳ್ಳೆಯ ವಿಷಯವಾಗಿದೆ. ಹೊರಗಿನ ಆಸ್ಪತ್ರೆಗಳಲ್ಲಿ ಡಾಕ್ಟರ್‌ಗಳ ಶುಲ್ಕವು ತುಂಬಾ ಜಾಸ್ತಿ ಇರುತ್ತದೆ. ಆತ್ಮಶಕ್ತಿ ಸಹಕಾರಿ ಸಂಘವು ಇಂತಹ ಗುಣಮಟ್ಟದ ಶಿಬಿರಗಳನ್ನು ಆಯೋಜಿತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು.
ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ನ ವೈದ್ಯರಾದ ಡಾ. ದರ್ಶನ್ ಅವರು ಮಾತನಾಡಿ, ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ, ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ. ಶಿಬಿರದಲ್ಲಿ ಲಭ್ಯವಿರುವ ಸೇವೆಗಳನ್ನು ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಮುಡಿಪು ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟ್ ಸದಸ್ಯರಾದ ಶ್ರೀ ಪ್ರಶಾಂತ್ ಕಾಮತ್ ಅವರು ಮಾತನಾಡಿ “ಕೆಲಸದ ಒತ್ತಡ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳಿಂದ ನಮ್ಮ ಆರೋಗ್ಯದತ್ತ ಗಮನ ಹರಿಸಲು ಸಾಧ್ಯವಾಗದ ಕಾರಣ, ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇಂತಹ ಶಿಬಿರಗಳಲ್ಲಿ ಪ್ರತಿ ೬ ತಿಂಗಳಿಗೊಮ್ಮೆ ತಮ್ಮ ಆರೋಗ್ಯ ತಪಾಸಣೆ ಮಾಡಿದರೆ ಉತ್ತಮ ಜೀವನ ಶೈಲಿ ನಡೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ತನ್ನ ಎಲ್ಲಾ ಶಾಖೆಗಳ ವಾರ್ಷಿಕೋತ್ಸವದಂದು ಇಂತಹ ಶಿಬಿರಗಳನ್ನು ಆಯೋಜಿಸುತ್ತಿರುವುದು ಜನಸಾಮಾನ್ಯರಿಗೆ ತುಂಬಾ ಅನುಕೂಲವಾಗಿದೆ” ಎಂದರು.
ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ ೯೬ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಉಚಿತ ಆರೋಗ್ಯ ಶಿಬಿರ ಶಿಬಿರಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇವತ್ತಿನ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರ್ನಾಡು ಘಟಕ ಇದರ ಸರ್ವ ಪಧಾಧಿಕಾರಿಗಳಿಗೆ ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಮುಡಿಪು ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟ್ನ ಸದಸ್ಯರಾದ ಶ್ರೀ ಪ್ರಕಾಶ್ ಕಾಮತ್, ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ವೈದ್ಯರಾದ ಡಾ. ಶಾಕ್ಲೆನ್ ಮುಸ್ತಕ್ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಕನ್ನಡಕ ವಿತರಣೆ, ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಕುಮಾರಿ ನಿಶ್ಮಿತಾ ಸ್ವಾಗತಿಸಿದರು. ಸಂಘದ ಶಾಖಾಧಿಕಾರಿ ಶ್ರೀಮತಿ ಅಕ್ಷತಾ ಕೆ. ವಂದಿಸಿದರು. ಹಿರಿಯ ಶಾಖಾಧಿಕಾರಿ ಶ್ರೀ ಸಚಿನ್ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು