11:58 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ನಿಟ್ಟೆ ಯೂನಿವರ್ಸಿಟಿ ಕುಲಪತಿ, ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕ ವಿನಯ ಹೆಗ್ಡೆ ನಿಧನ

01/01/2026, 10:48

ಮಂಗಳೂರು(reporterkarnataka.com): ನಿಟ್ಟೆ ಡೀಮ್ಡ್-ಟು-ಬಿ-ಯೂನಿವರ್ಸಿಟಿ ಕುಲಪತಿ ಮತ್ತು ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಶಿವಭಾಗ್ ನಲ್ಲಿರುವ ನಿವಾಸದಲ್ಲಿ ನಿಧನರಾದರು. ಶಿವಬಾಗ್‌ನಲ್ಲಿರುವ ‘ಸದಾನಂದ’ ನಿವಾಸದಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ಅವರಿಗೆ 86 ವರ್ಷ ವಯಸ್ಸಾಗಿತ್ತು ಮತ್ತು ಅವರು ಪತ್ನಿ ಸುಜಾತಾ ಹೆಗ್ಡೆ, ಪುತ್ರ ವಿಶಾಲ್ ಹೆಗ್ಡೆ ಮತ್ತು ಪುತ್ರಿ ಅಶ್ವಿತಾ ಪೂಂಜಾ ಅವರನ್ನು ಅಗಲಿದ್ದಾರೆ.
ವಿನಯ ಹೆಗ್ಡೆ ಅವರು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ, ಲೋಕಸಭೆ ಮಾಜಿ ಸ್ಪೀಕರ್ ದಿವಂಗತ ಕೆ.ಎಸ್. ಹೆಗ್ಡೆ ಅವರ ಪುತ್ರ.
ಕರ್ನಾಟಕ ಮಾಜಿ ಲೋಕಾಯುಕ್ತ ಮತ್ತು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್. ಸಂತೋಷ್ ಹೆಗ್ಡೆ ಅವರ ಸಹೋದರರಾಗಿದ್ದರು.
ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕರಾಗಿದ್ದಾರೆ.
ಹೆಗ್ಡೆ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 3 ಗಂಟೆಯವರೆಗೆ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಿಟ್ಟೆ ಶಿಕ್ಷಣ ಆವರಣದಲ್ಲಿ ಸಂಜೆ 4.30ರಿಂದ ಸಂಜೆ 6 ಗಂಟೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು