10:59 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಇದೆ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

02/01/2026, 21:20

ಬೆಂಗಳೂರು(reporterkarnataka.com): ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿಯ ಸಂಚಾಲಕರೂ ಆಗಿರುವ ಸಚಿವ ಡಾ. ಪಾಟೀಲ್‌, ಜನವರಿ 13ಕ್ಕೆ ಈ ಸಮಿತಿಯ ಮೊದಲ ಸಭೆ ಮಾಡಲಿದ್ದೇವೆ ಎಂದರು.
ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಇತ್ತೀಚೆಗೆ ಸಮಿತಿ ರಚಿಸಿ, ಡಾ. ಶರಣಪ್ರಕಾಶ್‌ ಪಾಟೀಲ್‌ ಅವರನ್ನು ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಚುನಾವಣೆ ರೂಪುರೇಷೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರು ನೇಮಿಸಿರುವ ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬಿ. ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್‌.ಎಸ್. ಮಂಜುನಾಥ್‌ ಗೌಡ, ಕೀರ್ತಿ ಗಣೇಶ್‌ ಈ ಸಮಿತಿಯಲ್ಲಿ ಇದ್ದಾರೆ.

*ಕಾಲೇಜುಗಳಲ್ಲಿ ಋತುಚಕ್ರ ರಜೆ-ಸಿಎಂ ಆದೇಶ ಅಂತಿಮ*
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಸಿಎಂ ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.
ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು