11:20 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

02/01/2026, 21:44

ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ನಡೆದ ಗಲಾಟೆಯ ತನಿಖೆಯನ್ನು ಸಿಬಿಐ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಬಳ್ಳಾರಿಯಲ್ಲಿ ನಿನ್ನೆ ನಡೆದ ಘಟನೆ ರಾಜಕೀಯ ದ್ವೆಷದಿಂದ ಕೂಡಿದೆ ಹಾಗೂ ವಿರೊಧಿಗಳನ್ನು ದೈಹಿಕವಾಗಿ ಮುಗಿಸಲು ಮಾಡಿರುವ ಸಂಚು. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬಂದು ಗಲಾಟೆ ಮಾಡಿರುವುದು ಕಾಂಗ್ರೆಸ್ ಶಾಸಕರ ಪುಂಡರು ಎನ್ನುವುದು ಸ್ಪಷ್ಟ. ಅಲ್ಲದೇ ಎಂಟು ಗುಂಡು ಅವರ ಮನೆಯ ಮುಂದೆನೇ ಕಾಂಗ್ರೆಸ್ ಶಾಸಕರ ಸೆಕ್ಯುರಿಟಿ ಹಾರಿಸಿರುವುದು ವಿಡಿಯೊಗಳಲ್ಲಿ ಸ್ಪಷ್ಟವಾಗಿದೆ. ಇಷ್ಟೆಲ್ಲಾ ಆದರೂ ಯಾರ ಗನ್ ನಿಂದ ಗುಂಡು ಹಾರಿದೆ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ಎಸ್ ಐಟಿ ರಚನೆ ಮಾಡುವ ಮಾತನಾಡುತ್ತಿದ್ದಾರೆ. ಆದರೆ, ಈಗಾಗಲೇ ಡಜನ್ ಗಟ್ಟಲೇ ಎಸ್ ಐಟಿ ರಚನೆ ಮಾಡಿದ್ದು, ಎಸ್ ಐಟಿಯಿಂದ ತನಿಖೆ ಸಾಧ್ಯವಿಲ್ಲ. ಇದನ್ನು ಸಿಬಿಐ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತಾನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದ್ವೇಷ ರಾಜಕಾರಣ ಶುರುವಾಗಿದೆ. ಕಾಂಗ್ರೆಸ್ ಪುಂಡರಿಗೆ ಪೊಲೀಸರ ಭಯ ಇಲ್ಲದಾಗಿದೆ ಪೊಲಿಸ್ ಸ್ಟೇಷನ್ ಹರಾಜಾಗಿದೆ‌ ಪೊಲಿಸರನ್ನು ಹೆದರಿಸುತ್ತ ಕಾಂಗ್ರೆಸ್ ಪುಂಡರು ಮೆರೆಯುತ್ತಿದ್ದಾರೆ. ಇದು ಅತ್ಯಂತ ಖಂಡನೀಯ. ಕೂಡಲೇ ತನಿಖೆ ಆರಂಭ ಆಗಬೆಕು. ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಸುರಕ್ಷತೆಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ದ್ವೇಷ ಭಾಷಣ ಮಾಡುವವರ ವಿರುದ್ದ ಕಾನೂನು ತಂದಿರುವ ಕಾಂಗ್ರೆಸ್ ಸರ್ಕಾರ ದ್ವೆಷದಿಂದ ಗುಂಡು ಹಾರಿಸುವ ಅವರ ಶಾಸಕರನ್ನು ಬಂಧಿಸುವ ತಾಕತ್ತು ಸಿಎಂ ಹಾಗೂ ಗೃಹ ಸಚಿವರಿಗೆ ಇದಿಯಾ ಎಂದು ಜನ ಕಾದು ನೋಡುತ್ತಿದ್ದಾರೆ‌ ಎಂದು ಇದೇ ವೇಳೆ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು