ಇತ್ತೀಚಿನ ಸುದ್ದಿ
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್ ಒತ್ತಾಯ
02/01/2026, 23:37
ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ಗುಂಡು ಹಾರಿಸಿ ಒಬ್ಬರು ಮೃತಪಟ್ಟ ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ಆ ಶಾಸಕರನ್ನು ಕೂಡಲೇ ಬಂಧಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಮಧ್ಯಾಹ್ನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದರು. ಬಳಿಕ ಆರ್. ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಗೊತ್ತಿಲ್ಲದೇ ಗುಂಡು ಹಾರಿದೆ; ಗೊತ್ತಿಲ್ಲದೇ ಸತ್ತಿದ್ದಾರೆ ಎಂದು ನಾಳೆ ಹೇಳಬಹುದು ಎಂದು ತಿಳಿಸಿದರು. ಇವರು ನಾಳೆ ಏನು ಹೇಳಬಹುದೆಂದು ಇವತ್ತೇ ಹೇಳಿದ್ದೇನೆ. ಇವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಕೇಳಿದರು.
ಅವರು ಜನಾರ್ದನ ರೆಡ್ಡಿ ಮನೆ ಕಾಂಪೌಂಡಿಗೆ ಹೋಗಿ ಹೇಗೆ ಬ್ಯಾನರ್ ಕಟ್ಟಿದರು? ನಾವು ಪೊಲೀಸ್ ದೂರು ಕೊಟ್ಟಿದ್ದೇವೆ. ಆದರೂ ಎಫ್‍ಐಆರ್ ಆಗಿಲ್ಲ. ಅವರು ಕೊಟ್ಟ ದೂರಿಗೆ ಸಂಬಂಧಿಸಿ ಪಟಾಪಟ್ ಎಫ್‍ಐಆರ್ ಮಾಡಿದ್ದಾರೆ ಎಂದು ಟೀಕಿಸಿದರು.
ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಈ ನಿಯೋಗದಲ್ಲಿ ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕÀ ಎನ್.ರವಿಕುಮಾರ್, ಶಾಸಕರಾದ ಸಿ.ಸಿ. ಪಾಟೀಲ್, ಮಹೇಶ್ ಟೆÉಂಗಿನಕಾಯಿ, ವಿಧಾನ ಪರಿಷತ್ತಿನ ಸದಸ್ಯ ಕೇಶವ ಪ್ರಸಾದ್, ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ಸಪ್ತಗಿರಿ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಉಪಸ್ಥಿತರಿದ್ದರು












