10:44 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangaluru | ಕಡಲನಗರಿ ಕುಡ್ಲದ ತಣ್ಣೀರುಬಾವಿಯಲ್ಲಿ ಜನವರಿ 9ರಿಂದ ಟ್ರಯಥ್ಲಾನ್

03/01/2026, 13:16

ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ತಪಸ್ಯಾ ಫೌಂಡೇಶನ್ ವತಿಯಿಂದ ಮಂಗಳೂರು ಬೀಚ್ ಉತ್ಸವ ಮತ್ತು ಮಂಗಳೂರು ಟ್ರಯಥ್ಲಾನ್ 2026 ಜನವರಿ 9 ರಿಂದ 11 ರವರೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಆಯೋಜಿಸಲಾಗುತ್ತಿದೆ. ಮೂಲಭೂತ ಸೌಕರ್ಯಗಳು, ವೈದ್ಯಕೀಯ ಸಹಾಯ ವಿದ್ಯುತ್, ಸಂಚಾರ ನಿರ್ವಹಣೆ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮಂಗಳೂರು ಸಹಾಯಕ ಆಯುಕ್ತೆ ಮೀನಾಕ್ಷಿ ಆರ್ಯ ತಿಳಿಸಿದ್ದಾರೆ.
ಅವರು ಮಂಗಳೂರು ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ಟ್ರಯಥ್ಲಾನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಾಗದಂತೆ ಕ್ರಮವಹಿಸಬೇಕು.

ಕಡಲತೀರಗಳನ್ನು ಸುಂದರವಾಗಿರಿಸಲು ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮವಹಿಸಲು ಅವರು ಸೂಚಿಸಿದರು. ಉತ್ಸವ ಯಶಸ್ವಿಯಾಗಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಪಸ್ಯಾ ಫೌಂಡೇಶನ್ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು