10:19 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Belagavi | ಅಥಣಿಯಲ್ಲಿ ರೋಟರಿ ಉದ್ಯಾನವನ ಉದ್ಘಾಟನೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

04/01/2026, 11:20

ಬೆಳಗಾವಿ(reporterkarnataka.com): ಅಥಣಿ ಪಟ್ಟಣದ ಅಬ್ಬಿಹಾಳ ರಸ್ತೆಯಲ್ಲಿರುವ ಶ್ರೀ ಜ್ಯೋತಿಬಾ ದೇವಸ್ಥಾನದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ರೋಟರಿ ಉದ್ಯಾನವನವನ್ನು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು.
ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್‌ ಕಾರ್ಯಕಾರಿಣಿ ಸದಸ್ಯರು, ಕೆಪಿಸಿಸಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪ.ಜಾ. ಮಾಧ್ಯಮ ವಕ್ತಾರರು, ಅಥಣಿ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರಾದ ರಾವಸಾಬ ನಿ. ಐಹೊಳೆ ಅವರು ಪಾಲ್ಗೊಂಡು ಮಾತನಾಡಿದರು.
ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶೆಟ್ಟರಮಠದ ಶ್ರೀ ಮರುಳಸಿದ್ದ ಸ್ವಾಮೀಜಿ, ಮಾಜಿ ಶಾಸಕ ಶಹಾಜಹಾನ್‌ ಡೊಂಗರಗಾಂವ,ಮಹೇಶ ಕುಮಠಳ್ಳಿ, ಕಾಂಗ್ರೆಸ್‌ ಮುಖಂಡರಾದ ಗಜಾನನ ಮಂಗಸೂಳಿ, ರಮೇಶ ಸಿಂದಗಿ, ದಿಗ್ವಿಜಯಪವಾರ ದೇಸಾಯಿ, ಅಸ್ಲಂ ನಾಲಬಂದ, ಬಸವರಾಜ ಬುಟಾಳಿ, ಆನಂದ ಟೊಣಪಿ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಅಥಣಿ ತಾಲೂಕಿನ ಶಿನಾಳ್ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮಂಜೂರಾತಿ ದೊರೆತಿರುವ ಹಿನ್ನೆಲೆಯಲ್ಲಿ, ನಿರ್ಮಾಣಗೊಳ್ಳಲಿರುವ ಶಾಲಾ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.


ನಂತರ ನೂತನ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಅಥಣಿ ನಗರದ ಸರ್ಕಾರಿ ಶಾಲೆ ಸಂಖ್ಯೆ–3ರಲ್ಲಿ ಕೇಂದ್ರೀಯ ವಿದ್ಯಾಲಯವನ್ನು ನಡೆಸಲು ಅನುಮತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿ, ಶಿಕ್ಷಕರು ಹಾಗೂ ಅಧಿಕಾರಿಗಳಿಂದ ಎದುರಿಸುತ್ತಿರುವ ಕುಂದುಕೊರತೆಗಳನ್ನು ಆಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು