8:52 PM Tuesday6 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಬೆಂಗಳೂರು: ಆರ್ಯ ಈಡಿಗ ಮಹಿಳಾ ಸಂಘದ ನಾರಿ ಶಕ್ತಿ ರಾಷ್ಟ್ರೀಯ ಮಹಿಳಾ ಸಮಾವೇಶ

04/01/2026, 23:21

ಬೆಂಗಳೂರು(reporterkarnataka.com): ಆರ್ಯ ಈಡಿಗ ಸಮುದಾಯದ ಎಲ್ಲಾ ಪಂಗಡಗಳ ಮಹಿಳೆಯರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಅವಶ್ಯಕತೆ ಇದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಭಾನುವಾರ ನಿಮಾನ್ಸ್ ಸಭಾಂಗಣದಲ್ಲಿ ಆರ್ಯ ಈಡಿಗ ಮಹಿಳಾ ಸಂಘದಿಂದ ಆಯೋಜಿಸಲಾಗಿದ್ದ ನಾರಿಶಕ್ತಿ ರಾಷ್ಟ್ರೀಯ ಈಡಿಗ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,ಈಡಿಗ ಸಮುದಾಯಗಳು ಮತ್ತಷ್ಟು ಸಂಘಟಿತರಾಗಬೇಕು,ಆಶ್ರಯ ಆರಾಧನ ಯೋಜನೆ ಮೂಲಕ ಮಾಜಿ ಸಿಎಂ ಬಂಗಾರಪ್ಪ ಅವರು ಬಡವರಿಗೆ ಸೂರು ಕಲ್ಪಿಸಿದರು,ಬ್ಯಾಂಕ್ ರಾಷ್ಟ್ರೀಕರಣ ಮಾಡಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಬಡವರು ಬ್ಯಾಂಕ್ ನೋಡುವಂತೆ ಆಯಿತು.
ಸಮಾಜದ ಹಿರಿಯರಾದ ಕಾಗೋಡು ತಿಮ್ಮಪ್ಪ ಅವರು ಬಡವರಿಗೆ ಹಕ್ಕು ಪತ್ರ ನೀಡಿದರು.
ಈಡಿಗ ಸಮುದಾಯದ ಮಹಿಳೆಯರು ಕೂಡ ರಾಜಕೀಯ ಕ್ಷೇತ್ರಕ್ಕೆ ಬರುವಂತಾಗಬೇಕು ಎಂದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಚಿಕ್ಕವನಿದ್ದಾಗ ನನಗೂ ನಮ್ಮೂರಿನಲ್ಲಿ ಅಸ್ಪೃಶ್ಯತೆಯ ಅನುಭವವಾಗಿತ್ತು.
ನಮ್ಮೂರಿನ ಪೂಜಾರಿಯನ್ನು ನಾವು ಮುಟ್ಟಿದರೆ ಆತ ಪುನಃ ಸ್ನಾನ ಮಾಡಿಕೊಂಡು ಬರುತ್ತಿದ್ದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಆಸ್ಪಶ್ಯತೆಯ ವಿರುದ್ದ ಹೋರಾಟ ನಡೆಸಿದರು. ಹಿಂದುಳಿದ ವರ್ಗಗಳಿಗೆ ಶಿಕ್ಷಣ ನೀಡಿದರು
ಸಮಸಮಾಜನ ನಿರ್ಮಾಣಕ್ಕೆ ಶ್ರಮಿಸಿದರು, ಈಡಿಗ ಸಮುದಾಯಗಳು ಮತ್ತಷ್ಟು ಸಂಘಟಿತರಾಗಬೇಕು ಎಂದು ಹೇಳಿದರು.
ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಮಾತನಾಡಿ, ಈಡಿಗ ಸಮುದಾಯದ ಹೆಣ್ಣು ಮಕ್ಕಳು ಇತೀಚೆಗೆ ಶಿಕ್ಷಿತರಾಗಿ ಸಂಘಟಿತರಾಗುವುದು ಅತ್ಯಂತ ಸಂತಸ ತಂದಿದೆ. ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಈಡಿಗ ಸಮುದಾಯದ ಮಹಿಳೆಯರು ಭಾಗವಹಿಸಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.
ತೆಲಂಗಾಣ ರಾಜ್ಯದ ಮಾಜಿ ಸಚಿವ ವಿ.ಶ್ರೀನಿವಾಸ ಗೌಡ ಮಾತನಾಡಿ, ಆಂದ್ರ ಪ್ರದೇಶ, ತಮಿಳು ಲನಾಡು, ಕೇರಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈಡಿಗ ಸಮುದಾಯದವರು ವಾಸವಾಗಿದ್ದಾರೆ. ಈಡಿಗ ಮಹಿಳೆಯರು ರಾಷ್ಟ್ರೀಯ ಮಟ್ಟದಲ್ಲಿ ಒಂದಾಗುವ ಅವಶ್ಯಕತೆ ಇದೆ ಎಂದು ಹೇಳಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷೆ ಡಾ.ನಳಿನಾಕ್ಷಿ ಸಣ್ಣಪ್ಪ, ಅಧ್ಯಕ್ಷೆ ಅಮಿತ ಆನಂದ್ ಮಾತನಾಡಿ, ಮಹಿಳಾ ಶಕ್ತಿಯನ್ನು ಬಲಪಡಿಸಲು ಸಮ್ಮೇಳನದ ಪ್ರಧಾನ ಉದ್ದೇಶವಾಗಿದೆ. ಸಮುದಾಯದ ಪರವಾಗಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಮಂಡಳಿಗಳಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಮರ್ಪಕ ಪ್ರಾತಿನಿಧ್ಯವನ್ನು ಪಡೆಯಲು ನಮ್ಮ ಬೇಡಿಕೆಗಳನ್ನು ಒಗ್ಗಟ್ಟಿನ ಧ್ವನಿಯಲ್ಲಿ ಮಂಡಿಸುವುದು, ಏಕತೆ ಮತ್ತೊಂದು ಶಕ್ತಿಯ ಮೂಲಕ ಸಕಾರಾತ್ಮಕ ಬದಲಾವಣೆಗೆ ದಾರಿ ಮಾಡಿಕೊಡುವುದು ಈ ಸಮಾವೇಶದ ಆಶಯವಾಗಿದೆ ಎಂದರು.
ಶ್ರೀ ನಾರಾಯಣ ಗುರುಪೀಠದ ವಿಖ್ಯಾತಾನಂದ ಸ್ವಾಮೀಜಿ, ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಅಧ್ಯಕ್ಷ ಶ್ರೀ ರೇಣುಕಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವತ್ತು ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.


ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ,ನಾರಾಯಣ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಂಜುನಾಥ ಪೂಜಾರಿ, ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ.ಎಂ.ತಿಮ್ಮೇ ಗೌಡ,ಜನತಾ ಎಜಕೇಶನ್ ಸೊಸೈಟಿಯ ಅಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು, ಕಾರ್ಯಕ್ರಮ ಅಧ್ಯಕ್ಷೆ ಅಶಿತ ಆನಂದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು