11:19 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವೈದ್ಯರ ನಿರ್ಲಕ್ಷ್ಯ: ತುರ್ತು ಚಿಕಿತ್ಸೆ ಸಿಗದೆ ಉಸಿರಾಟ ತೊಂದರೆಯ ರೋಗಿ ಸಾವು: ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ

05/01/2026, 12:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (60) ಅವರು ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.


ಆಸ್ಪತ್ರೆಗೆ ಬಂದು ಸುಮಾರು ಒಂದು ಗಂಟೆ ಕಳೆದರೂ ಸೂಕ್ತ ಚಿಕಿತ್ಸೆ ಸಿಗದೆ ಮಂಜುನಾಥ್ ಪರದಾಡಿದ್ದು, ನಂತರ ತಡವಾಗಿ ಐಸಿಯುವಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮಂಜುನಾಥ್ ಮೃತಪಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿ ರೋಗಿಗಳಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಮೃತರ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು