12:31 PM Friday10 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಇವಿಎಂ ಬಳಕೆ ಬಗ್ಗೆ ಸಮೀಕ್ಷೆ ನಡೆಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

07/01/2026, 12:06

ಬೆಂಗಳೂರು(reporterkarnataka.com): ರಾಜ್ಯ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 3ರ ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ‌‌‌.
ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು