11:43 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8ರಂದು ಲಕ್ಷ ಲಸಿಕಾ ಮೇಳ: 430 ಉಪ ಕೇಂದ್ರಗಳಲ್ಲಿ ವ್ಯವಸ್ಥೆ; ಹೆಚ್ಚುವರಿ ಸಿಬ್ಬಂದಿ ನಿಯೋಜನೆ

07/09/2021, 09:11

ಮಂಗಳೂರು(reporterkarnataka.com): ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಜಿಲ್ಲೆಯಲ್ಲಿ ಸೆ. 8ರ ಬುಧವಾರ ಹಮ್ಮಿಕೊಳ್ಳಲಾಗಿದ್ದು, 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 

ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ. 18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರೀಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಜಿಲ್ಲೆಯಲ್ಲಿ ಪಾಸಿಟಿವಿಟಿ ಸೂಚ್ಯಂಕ ಕಡಿಮೆ ಮಾಡಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಂತೆ ಈ ಬಾರಿಯೂ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಜಿಲ್ಲೆಯ ಜನತೆ ಆಚರಿಸುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು