1:47 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಣದ ಆಸೆಗೆ ಅಪ್ರಾಪ್ತ ವಯಸ್ಸಿನ ಪುತ್ರಿಯ ವೇಶ್ಯಾವಾಟಿಕೆಗೆ ಬಳಸಿದ ದುಷ್ಟ ತಂದೆ: ಆರೋಪಿಗಳ ಬಂಧನ

07/01/2026, 22:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಣದ ಆಸೆಗೆ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ನೂಕಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.
ತಾಯಿ ಇಲ್ಲದ 16 ವರ್ಷದ ಬಾಲಕಿಯನ್ನು ತಂದೆ ಗಿರೀಶ್ ಹಾಗೂ ಅಜ್ಜಿ ನಾಗರತ್ನ ಸೇರಿ ಹಣಕ್ಕಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡ ಆರೋಪ ಕೇಳಿಬಂದಿದೆ. ಆರೋಪದ ಪ್ರಕಾರ, ಭರತ್ ಶೆಟ್ಟಿ ಎಂಬ ವ್ಯಕ್ತಿಯೊಂದಿಗೆ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು, 6 ದಿನಗಳ ಕಾಲ 10ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಪಿರಿಯಡ್ಸ್ ಅವಧಿಯಲ್ಲಿಯೂ ಬಾಲಕಿಯನ್ನು ಬಲವಂತವಾಗಿ ಲೈಂಗಿಕ ಕೃತ್ಯಕ್ಕೆ ಒಳಪಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಮಂಗಳೂರಿನಿಂದ ಊರಿಗೆ ಮರಳಿದ ಬಳಿಕ ನೊಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ಹಾಗೂ ಅತ್ತೆಗೆ ವಿಷಯ ತಿಳಿಸಿದ್ದು, ಅವರ ಮೂಲಕ ಬೀರೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರು ದಾಖಲಿಸಿಕೊಂಡ ಬೀರೂರು ಪೊಲೀಸರು ಬಾಲಕಿಯ ತಂದೆ ಗಿರೀಶ್, ಅಜ್ಜಿ ನಾಗರತ್ನ ಹಾಗೂ ಭರತ್ ಶೆಟ್ಟಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು