7:56 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು: ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ

08/01/2026, 22:21

ಮಂಗಳೂರು(reporterkarnataka.com): ವೈದಿಕ ಕಾಲದ ಅದ್ವೈತ ಪರಂಪರೆಯ ದೈವಜ್ಞ ಬ್ರಾಹ್ಮಣರು ತಮ್ಮ ಆಚಾರ ವಿಚಾರ ಸಂಪ್ರದಾಯಗಳಲ್ಲಿ ಇನ್ನಷ್ಟು ನಿಷ್ಠೆ ಹೊಂದಿ ತಮ್ಮ ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನ ಗೊಳಿಸಬೇಕಾಗಿದೆ. ನಾಲ್ಕು ದಶಕಗಳ ಹಿಂದೆ ಸಮಾಜಕ್ಕೊಂದು ಕುಲಗುರು, ಶ್ರೀ ಮಠ ಹೊಂದಿದ ಬಳಿಕ ದೈವಜ್ಞ ಸಮಾಜವು ಸರ್ವಾಂಗೀಣ ಅಭಿವೃದ್ಧಿ ಹೊಂದಿದೆ” ಎಂದು ಶ್ರೀ ಶಂಕರಾಚಾರ್ಯ ಸಂಸ್ಥಾನ, ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾ ಸ್ವಾಮೀಜಿ ಹೇಳಿದರು.



ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ “ದೈವಜ್ಞ ದರ್ಶನ” ಕಾರ್ಯಕ್ರಮ ನಿಮಿತ್ತ ಆಗಮಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.
“ಮಕ್ಕಳಿಗೆ ಶಿಕ್ಷಣ ನೀಡಿ, ಜೊತೆಗೆ ಸಂಸ್ಕಾರ ಸಂಪ್ರದಾಯ ತಿಳಿಸಿ ಸಮಾಜ ಸೇವೆಯಲ್ಲಿ ತೊಡಗಿಸಿ” ಎಂದು ಕರೆ ನೀಡಿದರು.
“ಕೌಟುಂಬಿಕ ಹೊಣೆಗಾರಿಕೆ, ಸಮಾಜಮುಖಿ ಚಿಂತನೆ ಮತ್ತು ಮೌಲ್ಯಧಾರಿದ ಜೀವನಕ್ಕೆ ಮಕ್ಕಳನ್ನು ಪ್ರೇರೇಪಿಸುವ ಪರಿಪಾಠ ಕಡಿಮೆಯಾಗುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.
ಬಳಿಕ ಆಶೀರ್ವಚನ ನೀಡಿದ ಕಿರಿಯ ಶ್ರೀಗಳಾದ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮಿಜಿ ಧಾರ್ಮಿಕ ಮತ್ತು ನೈತಿಕ ಮೌಲ್ಯಗಳ ಮಹತ್ವ ವಿವರಿಸಿದರು. “ಹೆತ್ತವರಿಗೆ ಗೌರವ ಸಲ್ಲಿಸುವ ಪರಂಪರೆಯನ್ನು ಮತ್ತಷ್ಟು ಬಲಪಡಿಸಬೇಕು, ಸಮಾಜದ ದೀನ ಅಶಕ್ತರ ಸ್ವಾವಲಂಬನೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಉಭಯ ಶ್ರೀಗಳವರನ್ನು ನಗರದ ಮಣ್ಣಗುಡ್ಡೆಯಿಂದ ಅಶೋಕನಗರದ ದೈವಜ್ಞ ಕಲ್ಯಾಣ ಮಂಟಪದವರೆಗೆ ಮಂಗಳವಾದ್ಯ, ಭಜನಾ ನೃತ್ಯ, ಟ್ಯಾಬ್ಲೋ ಗಳ ಮೂಲಕ ಪೂರ್ಣ ಕುಂಭ ಸ್ವಾಗತ ದೊಂದಿಗೆ ಬರಮಾಡಿಕೊಳ್ಳಲಾಯಿತು.
ವೇದಿಕೆಯಲ್ಲಿ ದೈವಜ್ಞ ಬ್ರಾಹ್ಮಣ ಶ್ರೀಮಠದ ಟ್ರಸ್ಟಿಗಳಾದ ಕೆ. ಸುಧಾಕರ್ ಶೇಟ್, ಬೆಂಗಳೂರಿನ ಶ್ರೀ ಗಣಪತಿ ಶೇಟ್, ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ರಾಜ್ಯಾಧ್ಯಕ್ಷ ರವಿ ಗಾವ್ಕರ್ ಹುಬ್ಬಳ್ಳಿ, ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘದ ಅಧ್ಯಕ್ಷ ಸುರೇಶ್ ಶೇಟ್, ಕಾರ್ಯದರ್ಶಿ ಅನಿಲ್ ಡಿ. ರಾವ್, ರಾಜ್ಯ ಸಂಘದ ವಲಯ ಅಧ್ಯಕ್ಷ ಗಜೇಂದ್ರ ಶೇಟ್, ಸಮಾಜ ಸೇವಕರಾದ ಬಿ.ಎನ್. ರವೀಂದ್ರ ಶೇಟ್, ದೈವಜ್ಞ ಯುವಕ ಮಂಡಳಿ ಅಧ್ಯಕ್ಷ ಕೆ.ಎನ್. ಮಂಜುನಾಥ ಶೇಟ್, ಮಹಿಳಾ ಮಂಡಳಿ ಅಧ್ಯಕ್ಷೆ ಸಂಧ್ಯಾ ರಾಯ್ಕರ್ , ಮಂಗಳೂರು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ರವಿ ಗೋಕರ್ಣಕರ್, ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ರಮಾನಂದ ಶೇಟ್, ದೈವಜ್ಞ ಸೌರಭ ಪತ್ರಿಕೆ ಸಂಪಾದಕ ಎಸ್. ಪ್ರಶಾಂತ ಶೇಟ್ ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೈವಜ್ಞ ಸಮಾಜದ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು ಶ್ರೀ ದೈವಜ್ಞ ಕುಲ ಗುರುಗಳಿಗೆ ಪಾದಪೂಜೆ ಹಾಗೂ “ಗುರುವಂದನೆ” ಸಲ್ಲಿಸಿದರು. ಎಸ್. ರಾಜೇಂದ್ರಕಾಂತ ಶೇಟ್ ಸಭಾ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು