10:48 AM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ಘಟಕ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

09/01/2026, 21:43

ಮಂಗಳೂರು(reporterkarnataka.com): ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ 4 ಸಂಚಾರಿ ಅರೋಗ್ಯ ಘಟಕ ವಾಹನಗಳಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯoತ ಒಟ್ಟು 81 ಸಂಚಾರಿ ಅರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ. ಇದು ಸರಕಾರದ ಜನಪರ ಯೋಜನೆಗಳ ಭಾಗವಾಗಿದೆ. ಸಂಪರ್ಕ ರಹಿತ ಮತ್ತು ಗುಡ್ಡ ಗಾಡು ಪ್ರದೇಶಗಳಿಗೆ ಈ ಅರೋಗ್ಯ ಸೇತು ವಾಹನಗಳು ತೆರಳಿ ಅರೋಗ್ಯ ಸೇವೆ ನೀಡಲಿದೆ ಎಂದು ಹೇಳಿದರು.
ಈ ವಾಹನದಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್ ಮತ್ತು ಒಬ್ಬ ಲ್ಯಾಬ್ ಟೆಚ್ನಿಷಿಯನ್ ಇರಲಿದ್ದಾರೆ. ಅಗತ್ಯವಿರುವ ಔಷಧಿಗಳು, ಸಲಕರಣೆಗಳು, ತುರ್ತು ಅರೋಗ್ಯ ಪರಿಸ್ಥಿತಿಯ ನಿರ್ವಹಣೆಗೆ ಜೀವನಾವಶ್ಯಕ ಔಷಧಿಗಳೊಂದಿಗೆ ಈ ಅರೋಗ್ಯ ಸೇತು ವಾಹನವನ್ನು ಸಜ್ಜುಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸ್ಥಳೀಯರಿಗೆ ಮುಂಗಡವಾಗಿ ತಿಳಿಸಿ ಸಂಚಾರಿ ಅರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಜಿಲ್ಲಾ ಪಂಚಾಯತ್ ಸಿಇಓ ವಿನಾಯಕ್ ನರ್ವಡೆ, ಜಿಲ್ಲಾ ಅರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ ಶಿವಪ್ರಕಾಶ್, ಲೇಡಿಘೋಷನ್ ಅಧೀಕ್ಷಕ ಡಾ ದುರ್ಗಾ ಪ್ರಸಾದ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು