5:08 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ: ಸಿಎಂ

10/01/2026, 17:32

ಬೆಂಗಳೂರು(reporterkarnataka.com):ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ ಮಹೋತ್ಸವ ದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು.
ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆ ಅಗತ್ಯ
ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದರು.

*ಶಿಕ್ಷೆ ಪ್ರಮಾಣದರದಲ್ಲಿ ಕರ್ನಾಟಕಕ್ಕೆ 22 ನೇ ಸ್ಥಾನ:*
ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22 ನೇ ಸ್ಥಾನದಲ್ಲಿದೆ. ಕೇರಳದಲ್ಲಿ 87% ರಷ್ಟಿದೆ., ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, , ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಕಿವಿ ಮಾತು ಹೇಳಿದರು.

*ನ್ಯಾಯ ಎತ್ತಿ ಹಿಡಿಯುವ ಪ್ರಯತ್ನವನ್ನು ಅಭಿಯೋಜಕರು ಮಾಡಬೇಕು:*.
ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ , ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

*ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಭರವಸೆ:*
ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು ಎಂದ ಮುಖ್ಯಮಂತ್ರಿಗಳು ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡುವ ಭರವಸೆ ನೀಡಿದ ಮುಖ್ಯಮಂತ್ರಿಗಳು, ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂಬ ಆಶ್ವಾಸನೆಯಿತ್ತರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ ಪಾಟೀಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿ, ಪೊಲೀಸ್ ಮಹಾ ನಿರ್ದೇಶಕರಾದ ಡಾ: ಎಂ. ಎ.ಸಲೀಂ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರಾದ ಅಂಜಲಿ ದೇವಿ ರಾಜ್ಯ ಅಭಿಯೋಜನಾ ಅಧಿಕಾರಿಗಳ ಸಂಘದ ಅಧ್ಯಕ್ಷ ಅಶ್ವಥನಾರಾಯಣ್,ಕಾರ್ಯದರ್ಶಿ ಸವಿತಾ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು