12:26 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

11/01/2026, 00:16

ಮಂಗಳೂರು(reporterkarnataka.com): ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ. ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಇಂದು ಮಂಗಳೂರಿನ ಹೋಟೆಲ್ ಅವತಾರ್ ನಲ್ಲಿ ಆಯೋಜಿಸಲಾಗಿದ್ದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026 ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರವಾಸೋದ್ಯಮ ಸಮಾವೇಶ -2026 ದಲ್ಲಿ ಬಂಡವಾಳ ಹೂಡಿಕೆ ಮಾಡಲು ಲೆಟರ್ ಆಫ್ ಇಂಟೆಂಟ್ ಗೆ ಅನೇಕರು ಸಹಿ ಹಾಕಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಾಗುವವರಿಗೆ ಸರ್ಕಾರ ನೆರವಾಗಲಿದೆ. ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿರುವ ಜಿಲ್ಲೆಗಳು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರವಾಸೋದ್ಯಮ ನೀತಿ ರೂಪಿಸಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಾದ ಅನೇಕ ಸ್ಥಳಗಳಲ್ಲಿದ್ದು, ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ ಎಂದರು. 2024 ರಿಂದ 29ರವರಿಗೆ ಐದು ವರ್ಷಗಳ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗಿದೆ ಎಂದರು.
ಸುಮಾರು 320 ಕಿಮೀ ಕರಾವಳಿ ಪ್ರದೇಶವಿದ್ದರೂ, ಇಲ್ಲಿಯವರೆಗೆ ಅದನ್ನು ಪ್ರವಾಸೋದ್ಯಮಕ್ಕೆ ಸೂಕ್ತವಾಗಿ ಬಳಸಿಕೊಂಡಿಲ್ಲ. ಜಾಗತಿಕವಾಗಿ ಗುರುತಿಸಲ್ಪಟ್ಟ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಆಸಕ್ತಿ ವಹಿಸಿದೆ ಎಂದರು.

*ತೆರಿಗೆ ನೀಡುವುದರಲ್ಲಿ ಕರಾವಳಿಯ ಕೊಡುಗೆ ಹಿರಿದು:*
ಈ ಭಾಗದಲ್ಲಿ ಬ್ಯಾಂಕಿಂಗ್, ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷವಾಗಿ ಆದ್ಯತೆ ನೀಡಿ ಅಭಿವೃದ್ಧಿಯಾಗಿದೆ. ಕರಾವಳಿಯ ಸರಾಸರಿ ಸಾಕ್ಷರತಾ ಪ್ರಮಾಣ 2011 ರಲ್ಲಿ 88.56 % ಇತ್ತು. ತೆರಿಗೆ ಕೊಡುವುದರಲ್ಲಿ ನಮ್ಮ ರಾಜ್ಯ ಮುಂದಿದೆ. ಜಿ ಎಸ್.ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದ್ದು, ಇದರಲ್ಲಿ ಕರಾವಳಿ ಜಿಲ್ಲೆಗಳ ಪಾತ್ರ ಹಿರಿದಿದೆ ಎಂದು ಅವರು ನುಡಿದರು.
ಬೆಂಗಳೂರು ಬಿಟ್ಟರೆ ಮಂಗಳೂರು ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದರು. ಪ್ರವಾಸೋದ್ಯಮ ಅಭಿವೃದ್ಧಿ ಯಾದರೆ ಮಹಾರಾಷ್ಟ್ರವನ್ನು ಹಿಂದಿಕ್ಕುವ ಅವಕಾಶ ನಮಗಿದೆ ಎಂದರು.

*ಸ್ಥಳೀಯವಾಗಿ ಉದ್ದಿಮೆ ಪ್ರಾರಂಭಿಸಿ:*
ಮಂಗಳೂರಿಗೆ ಓದಲೆಂದು ದೇಶವಿದೇಶಗಳಿಂದ ಬರುತ್ತಾರೆ. ಆದರೆ ಇಲ್ಲಿನ ಜನ ಅರಬ್ ದೇಶಗಳಿಗೆ ಕೆಲಸ ಅರಸಿಕೊಂಡು ಹೋಗುವ ಪರಿಸ್ಥಿತಿ ವಿಷಾದನೀಯ. ಇಲ್ಲೇ ಉಳಿದುಕೊಂಡು ದುಡಿಮೆ ಮಾಡುವ ಪ್ರಯತ್ನ ಮಾಡುವುದು ಅವಶ್ಯ ಎಂದು ಹೇಳಿದರು.

*ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶ:*
ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಮಂಗಳೂರಿನಲ್ಲಿ ಪಂಚತಾರ ಹೋಟೆಲ್ ಸ್ಥಾಪಿಸಲು ಪ್ರಕಾಶ್ ಶೆಟ್ಟರು ಮುಂದಾಗಿರುವುದು ಶ್ಲಾಘನೀಯ ಎಂದರು.

*ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು:*.
ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯ ವಾತಾವರಣ ನಿರ್ಮಾಣವಾಗಿರುವುದು ಸ್ವಾಗತಾರ್ಹ ಎಂದರು. ಧರ್ಮ , ಜಾತಿಯ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸವನ್ನು ಮಾಡಬಾರದು. ಒಂದು ಧರ್ಮದ ಮೇಲೆ ಮತ್ತೊಂದು ಧರ್ಮವನ್ನು ಎತ್ತಿ ಕಟ್ಟುವುದರಿಂದ ದೇಶಭಕ್ತಿ ಬರುವುದಿಲ್ಲ. ದೇಶದಲ್ಲಿರುವ ಎಲ್ಲಾ ಧರ್ಮಗಳು ಪ್ರೀತಿಯನ್ನೇ ಸಾರುತ್ತವೆಯೇ ಹೊರತು ದ್ವೇಷ ಸಾರುವುದಿಲ್ಲ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಕುವೆಂಪು ಅವರು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಂದರು.

*ಬಂಡವಾಳ ಹೂಡಿಕೆಗೆ, ಆಸಕ್ತಿ ಅಗತ್ಯ:*
ಪ್ರವಾಸೋದ್ಯಮದ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ಎಲ್ಲಾ ಮಾಧ್ಯಮಗಳು ಮಾಡಬೇಕು ಎಂದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡದ ಜನ ಸಾಹಸ ಪ್ರವೃತ್ತಿಯಿರುವವರು. ಸ್ಥಳೀಯವಾಗಿ ಉದ್ಯಮಗಳನ್ನು ಸ್ಥಾಪಿಸಬೇಕು ಎಂದು ಕರೆ ನೀಡಿದರು. ನಮ್ಮಲ್ಲಿ ಯಾವುದೇ ಕೊರತೆಗಳಿಲ್ಲ, ಬಂಡವಾಳ ಹೂಡಿಕೆಗೆ, ಆಸಕ್ತಿ ಅಗತ್ಯವಿದೆ ಎಂದು ತಿಳಿಸಿದರು.
ವಿಧಾನಸಭಾಧ್ಯಕ್ಷ ಯು. ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವರಾದ ಎಚ್. ಕೆ ಪಾಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸುರೇಶ್ ಶೆಟ್ಟಿ, ಸತೀಶ್ ಸೈಲ್, ಭೀಮಣ್ಣ ನಾಯಕ್, ಅಶೋಕ್ ರೈ, ರಾಜೇಗೌಡ, ಐವಾನ್ ಡಿಸೋಜಾ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಾಮನಾಥ್ ರೈ , ವಿನಯ್ ಕುಮಾರ್ ಸೊರಕೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು