4:59 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಭಾಭಿಷೇಕ:14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ

12/01/2026, 13:10

ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ 14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಭಾನುವಾರ ವಿಜೃಂಭಣೆಯಿಂದ ಜರಗಿತು.


ಪ್ರಾತಃ ಕಾಲ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ ಸಹಿತ ವೀರ ವೆಂಕಟೇಶ್ ದೇವರ ಹಾಗೂ ಉತ್ಸವ ಶ್ರೀನಿವಾಸ ದೇವರ ವಿಗ್ರಹಗಳಿಗೆ ಪಂಚಾಮೃತ , ಗಂಗಾಭಿಷೇಕ , ಕನಕಾಭಿಷೇಕ ಶತಕಲಶಭಿಷೇಕಗಳು ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಮಧ್ಯಾಹ್ನ ಪೂಜೆ ಬಳಿಕ ಸಮಾರಾಧನೆ ಸಾಯಂಕಾಲ ಸ್ವರ್ಣ ಲಾಲಕಿ ಯಲ್ಲಿ ಒಂದು ಪೇಟೆ ಉತ್ಸವ ಬಳಿಕ ಶ್ರೀ ದೇವಳದಲ್ಲಿ ಪ್ರಾಕಾರೋತ್ಸವ , ವಸಂತ ಪೂಜೆ ಸಹಸ್ರಾರು ಭಜಕರ ಸಮ್ಮುಖದಲ್ಲಿ ನಡೆಯಿತು .
*ಶ್ರೀ ದೇವರಿಗೆ ಸಹಸ್ರ ಕುಂಭಾಭಿಷೇಕ:*
ಜನವರಿ 19ರಂದು ಶ್ರೀ ವೀರ ವೆಂಕಟೇಶ ದೇವರಸಹಿತ ಪರಿವಾರ ದೇವರುಗಳಿಗೆ ಸಹಸ್ರ ಕುಂಭಾಭಿಷೇಕ ನೆರವೇರಲಿದ್ದು ಐದು ದಿನಗಳ ಪರ್ಯಂತ ಶಾಸ್ತ್ರೋಕ್ತವಾಗಿ ವಿವಿಧ ವೈಧಿಕರ ಸಹಯೋಗದೊಂದಿಗೆ ವೈದಿಕ ವಿಧಿವಿಧಾನಗಳು ಶ್ರೀ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯರ ನೇತೃತ್ವದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಲಿದೆ. ದೇಶ ವಿದೇಶಗಳಿಂದ ಸಾವಿರಾರು ಭಜಕರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು , ಬಳಿಕ ಜನವರಿ 25ರಂದು ವರ್ಷಾಮ್ ಪ್ರತಿ ಜರಗುವ ಬ್ರಹ್ಮರಥೋತ್ಸವ ನಡೆಯಲಿರುವುದು.
ಚಿತ್ರ: ಮಂಜು ನಿರೇಶ್ವಾಲ್ಯ

ಇತ್ತೀಚಿನ ಸುದ್ದಿ

ಜಾಹೀರಾತು