12:17 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಂಪನ್ನ

12/01/2026, 17:40

ಮಂಗಳೂರು(reporterkarnataka.com): ಜಗದ್ಗುರು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವದ ಪ್ರಯುಕ್ತ ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಸಂಪನ್ನವಾಯಿತು.


ಭಾನುವಾರ ಸಂಜೆ ಕೊಂಚಾಡಿ ಶ್ರೀ ಕಾಶೀಮಠದಿಂದ ಹೊರಟು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪಾದಯಾತ್ರೆ ಆಗಮಿಸಿತು.
ದಾರಿಯುದ್ದಕ್ಕೂ ಭಜನೆ, ಜಯಕಾರ, ವ್ಯಾಸಧ್ವಜಗಳೊಂದಿಗೆ ಭಕ್ತರು ಸಂಭ್ರಮಿಸಿದರು.
ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾದರು. ವಿವಿಧ ಟ್ಯಾಬ್ಲೋಗಳು, ಚೆಂಡೆ, ವಾದ್ಯಗಳೊಂದಿಗೆ ಸಹಸ್ರಾರು ಭಜಕರು ಹೆಜ್ಜೆ ಹಾಕಿ ಧನ್ಯತಾಭಾವ ಅನುಭವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು