10:27 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ: ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ

14/01/2026, 20:06

ಮಂಗಳೂರು(reporterkarnataka.com): ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ.
ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಜನವರಿ 21ರಿಂದ 23ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದ್ದು, ಜ.23ರಂದು ರಾತ್ರಿ7 ಗಂಟೆಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಕದ್ರಿ ಮಹಿಳಾ ಯಕ್ಷಕೂಟ ದವರಿಂದ ಮಹಿಳಾ ಯಕ್ಷಗಾನ, ನಮ್ಮ ಬೆದ್ರ ತಂಡದವರಿಂದ ತುಳು ನಾಟಕ ನಡೆಯಲಿದೆ.
ಇದೇ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಈ ಹಿಂದೆ ಸಾಲಿಗ್ರಾಮ ಮೇಳದ ಸಂಚಾಲಕ ಕಿಶನ್ ಹೆಗ್ಡೆ, ರಮೇಶ್ ಭಂಡಾರಿ ಪಟ್ಲ ಸತೀಶ್ ಶೆಟ್ಟಿ, ಶಶಿಕಾಂತ್ ಶೆಟ್ಟಿ ಕಾರ್ಕಳ, ರಾಘವೇಂದ್ರ ಮಯ್ಯ, ಕಟೀಲು ಶ್ರೀಹರಿ ನಾರಾಯಣದಾಸ ಆಸ್ರಣ್ಣ, ಲೋಕೇಶ್ ಮಚ್ಚೂರು ಮೊದಲಾದವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
*ಕುಂದೇಶ್ವರ ಕಲಾಭೂಷಣ ಪ್ರಶಸ್ತಿ:* ರಂಗಭೂಮಿ ಕಲಾವಿದರಿಗೆ ನೀಡಲಾಗುವ ಕುಂದೇಶ್ವರ ಕಲಾಭೂಣ ಭೂಷಣ ಪ್ರಶಸ್ತಿ ಈ ಬಾರಿ ಉಮೇಶ್ ಮಿಜಾರು ಅವರಿಗೆ ಪ್ರಧಾನ ಮಾಡಲಾಗುವುದು.
ಸಮಾರಂಭದ ಬಳಿಕ ನಮ್ಮ ಬೆದ್ರ ಕಲಾವಿದರಿಂದ ವೈರಲ್ ವೈಶಾಲಿ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

*ಯಕ್ಷ ಕೋಗಿಲೆ: ಕಾವ್ಯಶ್ರೀ ಅಜೇರು:*
ತಮ್ಮ 9ನೇ ವಯಸ್ಸಿನಲ್ಲೇ ಯಕ್ಷಗಾನ ಭಾಗವತಿಕೆಯನ್ನು ಕಲಿಯಲು ಆರಂಭಿಸಿದ ಕಾವ್ಯಶ್ರೀ, ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಂತಹ ದಿಗ್ಗಜರಿಂದ ಮಾರ್ಗದರ್ಶನ ಪಡೆದಿದ್ದಾರೆ.
21 ವರ್ಷಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತೊಡಗಿಸಿಕೊಂಡಿರುವ ಕಾವ್ಯಶ್ರೀ ಅವರು, ತೆಂಕುತಿಟ್ಟು ಯಕ್ಷಗಾನ ರಂಗದ ಅಗ್ರಮಾನ್ಯ ಮಹಿಳಾ ಭಾಗವತರಾಗಿ ಗುರುತಿಸಿಕೊಂಡಿದ್ದಾರೆ. ಮಂಗಳೂರು ಆಕಾಶವಾಣಿಯ ‘ಬಿ’ ಗ್ರೇಡ್ ಕಲಾವಿದೆಯಾಗಿರುವ ಇವರು ದೂರದರ್ಶನ ಹಾಗೂ ಚಂದನ ವಾಹಿನಿಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ತೆಂಕು ಮತ್ತು ಬಡಗು ಉಭಯ ತಿಟ್ಟುಗಳಲ್ಲೂ ಪ್ರೌಢಿಮೆ ಹೊಂದಿರುವ ಇವರು, ಎರಡೂ ಶೈಲಿಗಳ ಪ್ರಸಿದ್ಧ ಭಾಗವತರೊಂದಿಗೆ ಜುಗಲ್ಬಂದಿ ನಡೆಸಿ ಸೈ ಎನಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಮಟ್ಟದ ಯಕ್ಷಗಾನ ತಾಳಮದ್ದಳೆ ಸ್ಪರ್ಧೆಗಳಲ್ಲಿ ಸತತವಾಗಿ ಬಹುಮಾನಗಳನ್ನು ಪಡೆಯುವ ಮೂಲಕ ತಮ್ಮ ಗಾಯನದ ಮಾಧುರ್ಯವನ್ನು ಸಾಬೀತುಪಡಿಸಿದ್ದಾರೆ.
ಕಾವ್ಯಶ್ರೀ ಅವರು ಕೇವಲ ಹವ್ಯಾಸಿ ಕಲಾವಿದೆಯಾಗಿ ಉಳಿಯದೆ, ಕಟೀಲು ಮೇಳ, ಬಪ್ಪನಾಡು ಮೇಳ, ಹೊಸನಗರ ಮೇಳ ಸೇರಿದಂತೆ ಕರಾವಳಿಯ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಅತಿಥಿ ಕಲಾವಿದೆಯಾಗಿ ಭಾಗವಹಿಸಿ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದಾರೆ.
ಮುಂಬೈ, ಪುಣೆ, ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕಲಾ ಸೇವೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಜೇರು ಶ್ರೀಪತಿ ನಾಯಕ್ ಮತ್ತು ಉಮಾ ದಂಪತಿಗಳ ಪುತ್ರಿಯಾಗಿ 1994ರಲ್ಲಿ ಜನಿಸಿದ ಕಾವ್ಯಶ್ರೀ ಅವರು ವಿದ್ಯಾಭ್ಯಾಸದಲ್ಲಿ ಅತ್ಯಂತ ಚುರುಕಾಗಿದ್ದವರು. ಬಿ.ಇಡಿ ಹಾಗೂ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಶ್ರೇಣಿ.

*ಕಲಾಭೂಷಣ ಉಮೇಶ್ ಮಿಜಾರ್:*
ಮಂಗಳೂರಿನ ಮಿಜಾರಿನ ಯಕ್ಷಗಾನ ಕಲಾವಿದ ದಂಪತಿ ಪುತ್ರರಾದ ಉಮೇಶ್ ಮಿಜಾರ್.
ಬಡತನದ ಕಾರಣ 9ನೇ ತರಗತಿಗೆ ಶಿಕ್ಷಣ ಮೊಟಕುಗೊಳಿಸಿ ಉದ್ಯೋಗಕ್ಕಾಗಿ ಮುಂಬೈಗೆ ವಲಸೆ ಹೋದರು. ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಲೇ ರಂಗಭೂಮಿಯತ್ತ ಆಕರ್ಷಿತರಾದ ಇವರು, ಮುಂಬೈನಲ್ಲಿ ಮಹಿಳಾ ಪಾತ್ರದ ಮೂಲಕ ಮೊದಲ ಬಾರಿ ಬಣ್ಣ ಹಚ್ಚಿದರು.
ನಂತರ ನಾಟಕ ರಚನೆ ಹಾಗೂ ಹಾಸ್ಯ ನಟನೆಯಲ್ಲಿ ತೊಡಗಿಸಿಕೊಂಡ ಇವರು, 1996ರಲ್ಲಿ ‘ನಮ್ಮ ಕಲಾವಿದೆರ್ ಬೆಳ್ಳಿ’ ತಂಡವನ್ನು ಕಟ್ಟಿ ಯಶಸ್ವಿ ಸಂಘಟಕರಾದರು. ಅನೇಕ ತುಳು ನಾಟಕಗಳನ್ನು ರಚಿಸಿ ನಿರ್ದೇಶಿಸಿರುವ ಇವರ ಖ್ಯಾತಿ ರಂಗಭೂಮಿಯಿಂದ ಬೆಳ್ಳಿಪರೆದೆಗೂ ವಿಸ್ತರಿಸಿತು.
35 ವರ್ಷಗಳ ಕಲಾ ಬದುಕಿನಲ್ಲಿ 80 ತುಳು ಸಿನಮಾಗಳಲ್ಲಿ, ಆರು ಕನ್ನಡ ಸಿನಿಮಾ ಆರು ಧಾರಾವಾಹಿಗಳಲ್ಲಿ ನಟಿಸಿರುವ ಉಮೇಶ್ ಮಿಜಾರ್ ಅವರು ಅಭಿನಯಿಸಿರುವ ತುಳು ನಾಟಕಗಳು ಅನೇಕ.

ಇತ್ತೀಚಿನ ಸುದ್ದಿ

ಜಾಹೀರಾತು