ಇತ್ತೀಚಿನ ಸುದ್ದಿ
Shivamogga | ತೀರ್ಥಹಳ್ಳಿಯ ಭಾರತೀಪುರ ಬಳಿ ಬಸ್ – ಕಾರು ಡಿಕ್ಕಿ: ಇಬ್ಬರು ಸಾವು
14/01/2026, 22:26
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ
info.reporterkarnataka@gmail.com
ಭಾರತೀಪುರ ತಿರುವಿನಲ್ಲಿ ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿಯಿಂದ ಶಿವಮೊಗ್ಗ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಓವರ್ ಟೇಕ್ ಮಾಡಲು ಹೋಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿ ಒಟ್ಟು ನಾಲ್ವರು ಇದ್ದರು ಎನ್ನಲಾಗಿದ್ದು ಸ್ಥಳದಲ್ಲೇ ಇಬ್ಬರ ಸಾವಾಗಿದ್ದು ಉಳಿದವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಇಬ್ಬರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.












