10:33 AM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಮಹಿಳೆಯರ ಮೇಲೆ ಗುಂಡು ಹಾರಿಸಿದ ತಾಲಿಬಾನ್

07/09/2021, 16:58

ಕಾಬೂಲ್(reporterkarnataka.com)

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ರ್‍ಯಾಲಿ ನಡೆಯುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ತಾಲಿಬಾನ್ ಗುಂಡಿನ ದಾಳಿ ನಡೆಸಿದ್ದು, ಮಕ್ಕಳೂ ಮಹಿಳೆಯರೂ ಸೇರಿದಂತೆ ಹಲವು ಮಂದಿ ಮೃತರಾಗಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಅಫ್ಘಾನಿಸ್ತಾನದ ಆಂತರಿಕ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಬುಲ್ ನಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರ ಪೈಕಿ ಮಹಿಳೆಯರ ಸಂಖ್ಯೆಯೇ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಕಾಬುಲ್ ಪಾಕಿಸ್ತಾನ ರಾಯಭಾರಿ ಕಚೇರಿ ಬಳಿ ಪ್ರತಿಭಟನೆ ನಡೆದಿದ್ದು, ಪಾಕ್ ವಿರುದ್ಧ ಪ್ರತಿಭಟನಾಕಾರರು ಬ್ಯಾನರ್ ಹಾಗೂ ಘೋಷಣಾ ವಾಕ್ಯಗಳನ್ನು ಕೂಗುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ತಾಲಿಬಾನ್ ಉಗ್ರರು ಗುಂಡು ಹಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು