7:17 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಸಂಕ್ರಾಂತಿ ಹಬ್ಬ: ಪೌರ ಕಾರ್ಮಿಕ ಮಹಿಳೆಯರು ಸಹಿತ 10 ಸಾವಿರ ಮಂದಿಗೆ ಕಬ್ಬು, ಎಳ್ಳು, ಬೆಲ್ಲ ವಿತರಣೆ

14/01/2026, 23:07

ಬೆಂಗಳೂರು(reporterkarnataka.com): ಜಯನಗರದ ತಿಲಕ್ ನಗರ ವಾರ್ಡ್ ಎಲ್.ಐ.ಸಿ.ಕಾಲೋನಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ 10 ಸಾವಿರ ಸಾರ್ವಜನಿಕರು ಮತ್ತು ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲ ವಿತರಣೆ ನಡೆಸಲಾಯಿತು.
ಜಯನಗರ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ಅವರು ಗೋಪೂಜೆ ಸಲ್ಲಿಸಿ ಕಬ್ಬು, ಎಳ್ಳು ವಿತರಿಸಿದರು.


ಎನ್.ನಾಗರಾಜು ಅವರು ಮಾತನಾಡಿ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ಮಾರ್ಗದರ್ಶನ ಮತ್ತು ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿರವರ ನೇತೃತ್ವದಲ್ಲಿ ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕಬ್ಬು, ಎಳ್ಳು ಬೆಲ್ಲವನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಮನೆ, ಮನೆಗೆ ತಲುಪಿಸಲಾಗಿದೆ ಇಂದು ನಮ್ಮ ಕ್ಷೇತ್ರದಲ್ಲಿ ಲಕ್ಷಾಂತರ ಫಲಾನುಭವಿಗಳು ಇದ್ದಾರೆ ಎಂದರು.
ಸಂಕ್ರಾಂತಿ ಹಬ್ಬದ ಕಿಚ್ಚು ಹಾಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಬ್ಬನ್ನು ರೈತರಿಂದ ನೇರವಾಗಿ ಖರೀದಿ ಮಾಡಿ 10ಸಾವಿರ ಜನರಿಗೆ ವಿತರಿಸಲಾಗುತ್ತಿದೆ.
ಸಂಕ್ರಾಂತಿ ಹಬ್ಬ ಎಲ್ಲರ ಬಾಳಿನಲ್ಲಿ ಬೆಳಕು ಮೂಡಲಿ, ನಂಬಿಕೆ, ಪ್ರೀತಿ, ವಿಶ್ವಾಸದಿಂದ ಎಲ್ಲರು ಬಾಳೋಣ ಎಂದು ಹೇಳಿದರು.
ಎಲ್.ಸಿ.ಹೆಚ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸಹಕಾರ ನೀಡಿದರು, ಸಂಕ್ರಾಂತಿ ಹಬ್ಬದ ಅಂಗವಾಗಿ ಮಹಿಳೆಯರು ಬೃಹತ್ ರಂಗೋಲಿ ಬಿಡಿಸಿ ಸಂಭ್ರಮಾಚಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು