9:56 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಜ.18: ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ: ಶಿವರಾಜ್‌ಕುಮಾರ್ ಸೇರಿದಂತೆ ತಾರೆಯರ ದಂಡು

15/01/2026, 17:23

ಮಂಗಳೂರು(reporterkarnataka.com): ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಗ್ಗೆ 9 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ ವಿಷಯ ತಿಳಿಸಿದರು.
ಅಂದು ಬೆಳಗ್ಗೆ 7.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ನೆಹರೂ ಮೈದಾನದವರೆಗೆ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ ಎಂದು ಹೇಳಿದರು.
ತಾರಾ ಆಕರ್ಷಣೆಯಾಗಿ ಡಾ. ಶಿವರಾಜ್‌ಕುಮಾರ್, ವಿಜಯ ರಾಘವೇಂದ್ರ, ಧನ್ಯ ರಾಮ್‌ಕುಮಾರ್, ಯುವ ರಾಜ್‌ಕುಮಾರ್, ಪೃಥ್ವಿ ಅಂಬರ್ ಹಾಗೂ ಅನುಶ್ರೀ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸಂಜೆ 5.30ಕ್ಕೆ ಪ್ರಕಾಶ್ ಮಹಾದೇವನ್ ಹಾಗೂ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ನವೀನ್ ಚಂದ್ರ ಸುವರ್ಣ ಮಾಹಿತಿ ನೀಡಿದರು.
ಯುವ ಸಮುದಾಯವನ್ನು ಸಂಘಟಿಸುವ ಉದ್ದೇಶದೊಂದಿಗೆ ಈ ಜಾಗತಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ವಿಶ್ವಕಪ್ ಮಹಿಳಾ ಕಬಡ್ಡಿಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಮೆರವಣಿಗೆ ಕುದ್ರೋಳಿಯಿಂದ ನಾರಾಯಣ ಗುರು ವೃತ್ತ, ಲಾಲ್‌ಭಾಗ್, ಕೆ.ಎಸ್. ರಾವ್ ರಸ್ತೆ ಮೂಲಕ ನೆಹರೂ ಮೈದಾನ ತಲುಪಲಿದೆ ಎಂದರು.
ಬೆಳಗ್ಗೆ 9 ಗಂಟೆಗೆ ದಾಮೋದರ ಆರ್. ಸುವರ್ಣ ವೇದಿಕೆಯಲ್ಲಿ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್‌ನ ಛೇರ್‌ಮ್ಯಾನ್ ಜಯರಾಮ್ ಬನಾನ್ ಹಾಗೂ ಪೂಜಾರಿ ಫಿಶ್ ಲ್ಯಾಂಡ್‌ನ ಮಾಲಿಕ ಎಲ್. ಸುಧಾಕರ ಪೂಜಾರಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸೇರಿದಂತೆ ಮಕ್ಕಳಿಗೂ ಮಹಿಳೆಯರಿಗೂ ವಿವಿಧ ಕ್ರೀಡಾವಳಿಗಳು ನಡೆಯಲಿವೆ ಎಂದು ಅವರು ನುಡಿದರು.
*ಸಮಾರೋಪ:* ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೇಂದ್ರ ಸಚಿವ ಶ್ರೀಪಾದ್ ನಾಯಕ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಚಿವ ಮಧು ಬಂಗಾರಪ್ಪ, ಸಂಸದರು ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಚಿತ್ರರಂಗ-ಕ್ರೀಡಾ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಯೂನಿಯನ್ ಸಂಚಾಲಕ ಸದಾನಂದ ಪೂಜಾರಿ, ಖಜಾಂಚಿ ಜಯಪ್ರಕಾಶ್, ಮಹಿಳಾ ವಿಭಾಗದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು