9:39 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಾಲಕರ ಬಾಲಮಂದಿರಕ್ಕೆ ಮಡಿಕೇರಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ದಿಢೀರ್ ಭೇಟಿ: ಪರಿಶೀಲನೆ

16/01/2026, 22:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರದ ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಬಾಲಕರ ಬಾಲ ಮಂದಿರದಲ್ಲಿರುವ ಮಕ್ಕಳಿಂದ ವಿದ್ಯಾಭ್ಯಾಸ, ಊಟೋಪಚಾರ, ಬಿಸಿನೀರು ವ್ಯವಸ್ಥೆ, ಗ್ರಂಥಾಲಯ ಸೌಲಭ್ಯ ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಕುಂದುಕೊರತೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಲಹೆ ಮಾಡಿದರು. ಮೆನು ಪ್ರಕಾರ ಗುಣಮಟ್ಟದ ಆಹಾರ ಪೂರೈಸಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು. ಪ್ರತೀ ತಿಂಗಳು ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತೇಜಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳು ಪ್ರತೀ ನಿತ್ಯ ದಿನಪತ್ರಿಕೆಯನ್ನು ಓದಬೇಕು. ಗ್ರಂಥಾಲಯ ಸೌಲಭ್ಯವನ್ನು ಪಡೆದು ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು.
ಪಾಠದ ಜೊತೆಗೆ ಆಟ ಇರಬೇಕು. ಹೆಚ್ಚು ಅಧ್ಯಯನ ಮಾಡುವುದರಿಂದ ಉನ್ನತ ವ್ಯಾಸಂಗ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.
ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ವೃತ್ತಿಪರ ಶಿಕ್ಷಣ ಮಾಡುವತ್ತ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಕೊರಗಬಾರದು. ಛಲ ಮತ್ತು ಆತ್ಮವಿಶ್ವಾಸ ಇದ್ದಲ್ಲಿ ಯಶಸ್ಸುಗಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಸತತ ಪ್ರಯತ್ನ ಅಗತ್ಯ ಎಂದು ಹೇಳಿದರು.
ಇಂದಿನ ಆಧುನಿಕ ಯುಗದಲ್ಲಿ ಬುದ್ದಿವಂತಿಕೆಗೆ ಆದ್ಯತೆ ಇದೆ. ಆ ನಿಟ್ಟಿನಲ್ಲಿ ಹೆಚ್ಚಿನ ಅಧ್ಯಯನ ಅಗತ್ಯ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಮತ್ತು ಮೊರಾರ್ಜಿ ದೇಸಾಯಿ, ಏಕಲವ್ಯ ವಸತಿ ಶಾಲೆಗಳ ವ್ಯಾಪ್ತಿಯಲ್ಲಿ ಮೆನು ಪ್ರಕಾರ ಗುಣಮಟ್ಟದ ಆಹಾರ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ದಿನಪತ್ರಿಕೆಯನ್ನು ಕಡ್ಡಾಯವಾಗಿ ತರಿಸಬೇಕು. ವಿದ್ಯಾರ್ಥಿಗಳು ದಿನಪತ್ರಿಕೆಯನ್ನು ಓದಲು ಉತ್ತೇಜಿಸಬೇಕು. ಗ್ರಂಥಾಲಯ ಬಳಕೆಗೆ ಅವಕಾಶ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಮಕ್ಕಳ ರಕ್ಷಣಾಧಿಕಾರಿಗಳಾದ ಸಚಿನ್ ಸುವರ್ಣ, ಇರ್ಷಾದ್, ಸಂಸ್ಥೆಯ ಮೇಲ್ವಿಚಾರಕರಾದ ಸತ್ಯಭಾಮ, ಪವಿತ್ರ, ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು