ಇತ್ತೀಚಿನ ಸುದ್ದಿ
ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು, ಬೈಕ್ ಸವಾರ ಗಂಭೀರ
17/01/2026, 16:30
ಗಿರಿಧರ್ ಕೊಂಪುಳಿರ ಮಡಿಕೇರಿ
info.repoeterkarnataka@gmail.com
ಕುಶಾಲನಗರ – ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಕಾಡು ಕುರಿಗೆ ಏಕಾಏಕಿ ಬೈಕ್ ಅಪ್ಪಳಿಸಿದ ಪರಿಣಾಮ ಮುಗ್ದ ಜೀವಿ ಸ್ಥಳದಲ್ಲೇ ಮೃತಪಟ್ಟು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಸಿದ್ದಾಪುರ ನಿವಾಸಿ ರಾಬಿನ್ ನೆಲ್ಸನ್ ತಡರಾತ್ರಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದು ಗಾಯಾಳು ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುಶಾಲನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.













