ಇತ್ತೀಚಿನ ಸುದ್ದಿ
ಡ್ರಗ್ಸ್ ಮಾರಾಟ ಯತ್ನ: ಓರ್ವ ಆರೋಪಿಯ ಬಂಧನ; ಎಂಡಿಎಂಎ ಮಾದಕ ವಸ್ತು ವಶ
18/01/2026, 14:08
ಮಂಗಳೂರು(reporterkarnataka.com): ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೇರಳದ ಎರ್ನಾಕುಲಂ ಮುತೊಲಪುರಂನ ಚುನಯಮಕ್ಕಿಲ್ ಹೌಸ್ ನಿವಾಸಿ ಜೂಡ್ ಮಾಥ್ಯೂ (20) ಎಂದು ತಿಳಿದು ಬಂದಿದೆ. ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಶನಿವಾರ ಜೂಡ್ ಮಾಥ್ಯೂ ಬೈಕ್ ನಲ್ಲಿ ನಿಷೇಧಿತ MDMA ಎಂಬ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆಂದು ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದರು. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಎನ್.ಎಸ್ ಬೈಕ್ ಸಮೇತ ಒಟ್ಟು ರೂ 70,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.












