11:49 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: 3 ವರ್ಷ ಕಠಿಣ ಸಜೆ

19/01/2026, 11:46

ಮಂಗಳೂರು(reporterkarnataka.com): ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಸುರತ್ಕಲ್ ಬಳಿ ಬಂಧಿಸಿದ್ದಾರೆ.
ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ ನವೀನ್ ಸಿಕ್ವೇರಾ (೫೨) ಬಂಧಿತ ಆರೋಪಿ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿರುತ್ತದೆ ನಂತರ ಆರೋಪಿಯು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ್ದು ಅರ್ಜಿ ಪರಿಶೀಲಿಸಿದ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದು ವರ್ಷ ಸಾಧಾ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 15000 ದಂಡ ವಿಧಿಸಿ ಈ ಶಿಕ್ಷೆಯನ್ನು 2022ರ ಒಳಗೆ ಅನುಭವಿಸುವಂತೆ ಇದಕ್ಕೆ ತಪ್ಪಿದಲ್ಲಿ ಜಿಲ್ಲಾ ನ್ಯಾಯಾಲಯದ ಈ ಹಿಂದಿನ ಆದೇಶದ ಪ್ರಕಾರ ಶಿಕ್ಷೆಗೆ ಒಳಪಡಬೇಕಾಗಿ ಆದೇಶಿಸಿ ತೀರ್ಪು ಪ್ರಕಟ ಮಾಡಿರುತ್ತದೆ . ತೀರ್ಪು ಪ್ರಕಟವಾದ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು ನ್ಯಾಯಾಲಯವು ಈತನ ಮೇಲೆ ಬಂಧನದ ವಾರೆಂಟ್ ಹೊರಡಿಸಿತ್ತು. ಈತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ವಾರಂಟ್ ಜಾರಿ ಸಿಬ್ಬಂದಿಗಳಾದ ಎಎಸ್ಐ ಮಚ್ಚೆಂದ್ರನಾಥ್ ಜೋಗಿ, ಹೆಚ್ ಸಿ ಅಭಿಷೇಕ್ ಹಾಗೂ ಹೆಚ್ ಸಿ ನಾರಪ್ಪ ಕೆಬಿ ರವರು ಈತನನ್ನು ದಿನಾಂಕ 14.01.2026 ರಂದು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಹೊನ್ನಕಟ್ಟೆಯ ಸುಪ್ರಭಾತ ಬಾರ್ ಅಂಡ್ ರೆಸ್ಟೋರೆಂಟ್ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಈ ಹಿಂದೆ ನೀಡಿದ ತೀರ್ಪಿನಂತೆ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ 5000/- ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು