9:13 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ “ಅಕ್ಷರ ಉತ್ಸವ”: ಪತ್ರಕರ್ತ, ರಂಗನಿರ್ದೇಶಕ ಗೋಪಾಲ ಅಂಚನ್ ಗೆ ಸನ್ಮಾನ

20/01/2026, 21:13

ಮಂಗಳೂರು(reporterkarnataka.com): ಬಂಟ್ವಾಳ ತಾಲೂಕಿನ ಆಲದಪದವು ಅಕ್ಷರ ಭಾರತಿ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ” ಅಕ್ಷರ ಉತ್ಸವ”ದಲ್ಲಿ ಪತ್ರಕರ್ತ, ರಂಗನಿರ್ದೇಶಕ ಗೋಪಾಲ ಅಂಚನ್ ಅವರ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕ್ರತಿಕ-ಸಾಹಿತ್ಯಿಕ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ,
ಶಾಲಾ ಸಂಚಾಲಕ ಮೋಹನ್ ರೈ.ಕೆ., ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಉದ್ಯಮಿ ಟಿ.ಹರೀಂದ್ರ ಪೈ,
ಪ್ರಗತಿಪರ ಕೃಷಿಕ ಅಮ್ಮು ರೈ ಹರ್ಕಾಡಿ, ಉದ್ಯಮಿ ಪ್ರೀತಮ್ ಶೆಟ್ಟಿ ದಂಡೆಗೋಳಿ, ಶ್ರೀ ಕಾರೀಂಜೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಶೆಟ್ಟಿ, ಪೋಷಕ ಸಂಘದ ಅಧ್ಯಕ್ಷ ಅರುಣ್ ಐತಾಳ್, ಶ್ರೀ ಹರಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಭಾರತಿ ಎಸ್.ರೈ, ಶಾಲಾ ನಾಯಕಿ ಧನ್ವಿ ಶೆಟ್ಟಿ, ಮುಖ್ಯ ಶಿಕ್ಷಕ ಮೋಹನ್ ಎಚ್. ಮೊದಲಾದವರು ಉಪಸ್ಥಿತರಿದ್ದರು.

*ಗೋಪಾಲ ಅಂಚನ್ ಕಿರು ಪರಿಚಯ:* ಬಹುಮುಖಿ ಕ್ಷೇತ್ರದಲ್ಲಿ ಕ್ರೀಯಾಶೀಲರಾಗಿರುವ ಗೋಪಾಲ ಅಂಚನ್ ಅವರು ಪತ್ರಕರ್ತರಾಗಿ, ರಂಗನಿರ್ದೇಶಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಬರಹಗಾರರಾಗಿ, ಕಾರ್ಯಕ್ರಮಗಳ ಸಂಘಟಕರಾಗಿ, ಕಾರ್ಯಕ್ರಮ ನಿರೂಪಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ, ಜನಪರ ಚಿಂತಕರಾಗಿ ಜನಮನ್ನಣೆ ಪಡೆದವರು.
ಇವರ ಕತೆ, ಕವನ, ಲೇಖನ, ಅಂಕಣ ಬರಹಗಳು
ನಾಡಿನ ವಿವಿಧ ಪತ್ರಿಕೆಗಳಲ್ಲಿ, ಸಂಚಿಕೆಗಳಲ್ಲಿ ಪ್ರಕಟಗೊಂಡಿದ್ದು ಇವರ ಸಂಪಾದಕತ್ವದ ವಿವಿಧ ಸ್ಮರಣ ಸಂಚಿಕೆಗಳು, ಅಭಿನಂದನಾ ಗ್ರಂಥಗಳು ಹಾಗೂ ಇವರ ವಿವಿಧ ಕೃತಿಗಳು ಸಾಹಿತ್ಯಲೋಕಕ್ಕೆ ಸಮರ್ಪಣೆಯಾಗುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲೂ ಚಿರಪರಿಚಿತರಾದವರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಮಾನವ ಬಂಧುತ್ವ ವೇದಿಕೆ ಬಂಟ್ವಾಳದ ಸ್ಥಾಪಕ ಸಂಚಾಲಕರಾಗಿ, ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಗೋಪಾಲ ಅಂಚನ್ ಅವರು ಪ್ರಸ್ತುತ ಕರ್ನಾಟಕ ಜರ್ನಲಿಸ್ಟ್ ಅಸೋಶಿಯೇಶನ್ ದ.ಕ.ಜಿಲ್ಲಾ ಘಟಕದ ಪದಾಧಿಕಾರಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ಹೋಬಳಿ ಘಟಕದ ಅಧ್ಯಕ್ಷರಾಗಿ,
ತುಳುಕೂಟ ಬಂಟ್ವಾಳದ ಸಲಹೆಗಾರರಾಗಿ,
ತುಳು ಪರಿಷತ್ತು ಮಂಗಳೂರಿನ ಪದಾಧಿಕಾರಿಯಾಗಿ,
ಯಕ್ಷಲೋಕ ಸಾಂಸ್ಕ್ರತಿಕ ಸಂಗಮ ಬಿ.ಸಿ.ರೋಡು, ಅಕ್ಷರ ಪ್ರತಿಷ್ಠಾನ ಆಲದಪದವು ಮತ್ತು ಕರ್ನಾಟಕ ಜಾನಪದ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಸ್ಥಾಪಕ ಸಂಚಾಲಕರಾಗಿ ತಾಲೂಕು, ಜಿಲ್ಲಾ, ರಾಜ್ಯಮಟ್ಟದ ಹಲವಾರು ಶೈಕ್ಷಣಿಕ-ಸಾಂಸ್ಕ್ರತಿಕ-ಸಾಹಿತ್ಯಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸಿದವರು.
ರಂಗನಟರಾಗಿ, ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿರುವ ಗೋಪಾಲ ಅಂಚನ್ ಅವರು 15 ಹೆಚ್ಚು ತುಳು ನಾಟಕಗಳು, ಅನೇಕ ಮಕ್ಕಳ ನಾಟಕಗಳು, ರೂಪಕಗಳು, ಬೀದಿ ನಾಟಕಗಳನ್ನು ಬರೆದು ನಿರ್ದೇಶಿಸಿ ತನ್ನದೇ ಆದ ಯಕ್ಷಲೋಕ ಸಾಂಸ್ಕ್ರತಿಕ ಸಂಗಮ ತಂಡ ಮತ್ತು ಇತರ ತಂಡಗಳ ಮೂಲಕ ಪ್ರದರ್ಶಿಸಿ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದವರು.
ಜಿಲ್ಲಾ, ರಾಜ್ಯ ಮಟ್ಟದ ವಿವಿಧ ಎನ್ ಜಿ ಓಗಳಲ್ಲಿ ತರಬೇತುದಾರರಾಗಿ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಅನೇಕ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ ಗೋಪಾಲ ಅಂಚನ್ ಅವರು ವಿಶೇಷವಾಗಿ ಮಾನವ ಹಕ್ಕು, ಮಹಿಳಾ ಹಕ್ಕು, ಮಕ್ಕಳ ಹಕ್ಕು, ಸಾಮಾಜಿಕ ಸಮಾನತೆ, ಮೌಢ್ಯತೆ ವಿರೋಧಿ ಅಭಿಯಾನ, ಶಿಕ್ಷಣದ ಹಕ್ಕು, ಆರೋಗ್ಯದ ಹಕ್ಕು ಮೊದಲಾದ ವಿಷಯಗಳಲ್ಲಿ
ಬರಹ, ಭಾಷಣ, ತರಬೇತಿ, ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಿದವರು.

ಇತ್ತೀಚಿನ ಸುದ್ದಿ

ಜಾಹೀರಾತು