9:50 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೇಂದ್ರ ಬಿಜೆಪಿ ಸರಕಾರ ರಾಷ್ಟ್ರದ ಅಭಿವೃದ್ದಿಗೆ ರಿವರ್ಸ್ ಗೇರ್ ಹಾಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

26/01/2026, 14:08

ಬೆಂಗಳೂರು(reporterkarnataka.com): ಬಿಜೆಪಿಯವರಿಗೆ ಈ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಗ್ರಾಮ ಪಂಚಾಯಿತಿ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ನಾವು ಮಾಡಿದ ವಿಕೇಂದ್ರೀಕರಣ ವ್ಯವಸ್ಥೆಯನ್ನು ಕೇಂದ್ರೀಕರಣದತ್ತ ತಿರುಗಿಸುತ್ತಿದ್ದಾರೆ. ನರೇಗಾ ಯೋಜನೆಯನ್ನು ಕುಲಗೆಡಿಸಿ, ಕೇವಲ ಯೋಜನೆಯ ಹೆಸರಿನಲ್ಲಿ ರಾಮನ ಹೆಸರು ಸೇರಿಸಿ ಜನರನ್ನು ಭಾವನಾತ್ಮಕವಾಗಿ ಆಟವಾಡಿಸಬಹುದು ಎಂದುಕೊಂಡಿದ್ದಾರೆ. ತನ್ಮೂಲಕ ಮೌಢ್ಯವನ್ನು ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ. ನಾವು ಜನರನ್ನು ಮೌಢ್ಯದಿಂದ ಹೊರತಂದು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದರೆ ಅವರು ಕೇವಲ ಓಟಿಗೋಸ್ಕರ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನರೇಗಾ ಯೋಜನೆಯಲ್ಲಿ ಲೋಪವಿದ್ದರೆ ಅದನ್ನು ಸರಿಪಡಿಸಿ, ಇನ್ನಷ್ಟು ಶಕ್ತಿ ತುಂಬುವ ಕೆಲಸ ಮಾಡಬಹುದಿತ್ತು. ಅದರ ಬದಲು ಇಂತಹ ಜನಪರ, ಜನಪ್ರಿಯ ಯೋಜನೆಯನ್ನೆ ಮುಗಿಸಲು ಹೊರಟಿದ್ದಾರೆ. ಅಂದರೆ, ರೋಗಿಗೆ ಚಿಕಿತ್ಸೆ ನೀಡಿ ಗುಣಪಡಿಸುವ ಬದಲು ರೋಗಿಯನ್ನೇ ಸಾಯಿಸಲು ಹೊರಟಿದ್ದಾರೆ. ಯೋಜನೆಯಲ್ಲಿ ಭ್ರಷ್ಟಾಚಾರ ಇದ್ದಿದ್ದರೆ ಸರಿಪಡಿಸಲು ಕೇಂದ್ರ ಸರಕಾರಕ್ಕೆ 12 ವರ್ಷ ಅವಕಾಶವಿತ್ತಲ್ಲವೇ? ಕಳೆದ 12 ವರ್ಷದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದರೂ ಯೋಜನೆಯಲ್ಲಿ ಯಾವೊಂದು ಬದಲಾವಣೆ, ಸುಧಾರಣೆ ಮಾಡದೆ, ಈಗ ಇದ್ದಕ್ಕಿದ್ದಂತೆ ಜ್ಞಾನೋದಯವಾದಂತೆ ಒಂದು ವ್ಯವಸ್ಥೆಯನ್ನೇ ನೇಣಿಗೆ ಹಾಕಲು ಹೊರಟಿದ್ದಾರೆ. ಅಂದರೆ ಇಷ್ಟು ವರ್ಷ ಅವರು ಭ್ರಷ್ಟಾಚಾರದ ಭಾಗವಾಗಿದ್ದರೆ? ಎಂದು ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ.
ದೇಶದ ಸುಮಾರು 12 ಕೋಟಿಗೂ ಅಧಿಕ ಬಡಜನರು, ಕಾರ್ಮಿಕರು, 6 ಕೋಟಿಗೂ ಅಧಿಕ ಮಹಿಳಾ ಕಾರ್ಮಿಕರು, 3 ಕೋಟಿಗೂ ಅಧಿಕ ಪರಿಶಿಷ್ಟ ಜಾತಿ, ವರ್ಗದ ಜನರು ತಮ್ಮ ಜೀವನೋಪಾಯಕ್ಕಾಗಿ ಕಳೆದ 20 ವರ್ಷಗಳಿಂದ ಯಾವ ಯೋಜನೆಯ ಮೇಲೆ ಅವಲಂಬಿತರಾಗಿದ್ದಾರೋ ಆ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ. ಬಡವರು ಬಡವರಾಗಿಯೇ ಇರಬೇಕು, ಅವರು ಜೀತದ ಆಳಾಗಿಯೇ ಇರಬೇಕು, ಮಹಿಳೆಯರು ಸಬಲೀಕರಣಗೊಳ್ಳಬಾರದು, ಅವರು ಸಮಾಜದ ಮುಖ್ಯ ವಾಹಿನಿಗೆ ಬರಬಾರದು ಎನ್ನುವ ಮನೋಸ್ಥಿತಿ ಬಿಜೆಪಿಯವರದ್ದು ಎಂದು ಅವರು ಹೇಳಿದ್ದಾರೆ.
ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ 20 ವರ್ಷಗಳ ಹಿಂದೆ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ದೊಡ್ಡ ಆಘಾತವಾಗಿದೆ. ಮನರೇಗಾ ಉಳಿಸಬೇಕೆಂದು ಮಂಗಳವಾರ ಕಾಂಗ್ರೆಸ್ ಪಕ್ಷ ರಾಜಭವನ ಚಲೋ ನಡೆಸಲಿದೆ. ಪ್ರತಿ ತಾಲ್ಲೂಕಿನಲ್ಲೂ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು