2:18 PM Friday6 - November 2026
ಬ್ರೇಕಿಂಗ್ ನ್ಯೂಸ್
Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |…

ಇತ್ತೀಚಿನ ಸುದ್ದಿ

ಪೌರಾಯುಕ್ತೆಗೆ ಧಮ್ಕಿ: ಕಾಂಗ್ರೆಸ್ ಉಚ್ಚಾಟಿತ ಮುಖಂಡ ರಾಜೀವ್ ಗೌಡ ಕೊನೆಗೂ ಅರೆಸ್ಟ್

26/01/2026, 19:49

ಚಿಕ್ಕಬಳ್ಳಾಪುರ(reporterkarnataka.com): ಕರ್ತವ್ಯ ನಿರತ ​ಶಿಡ್ಲಘಟ್ಟ ಪೌರಾಯುಕ್ತೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಉಚ್ಚಾಟಿತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬ್ಯಾನರ್ ತೆರವುಗೊಳಿಸಿದ ವಿಚಾರದಲ್ಲಿ ಪೌರಾಯುಕ್ತರಿಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ​ದೂರು ದಾಖಲಾದ ಬೆನ್ನಲ್ಲೇ ಬಂಧನದ ಭೀತಿಯಿಂದ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರು. ಗೌಡರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಮಂಗಳೂರು ರೈಲ್ವೆ ನಿಲ್ದಾಣ ಬಳಿ ರಾಜೀವ ಗೌಡ ಅವರ ಕಾರು ಪತ್ತೆಯಾಗಿತ್ತು. ಗೌಡ ಅವರು ನೆರೆಯ ರಾಜ್ಯವಾದ ಕೇರಳ ಅಥವಾ ಗೋವಾಕ್ಕೆ ತೆರಳಿರಬಹುದೆಂದು ಶಂಕಿಸಲಾಗಿತ್ತು. ಇದೀಗ ರಾಜೀವ್ ಗೌಡ ಅವರು ಪೊಲೀಸರ ಬಲೆಗೆ ಬಿದ್ದಿದ್ದು ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆದು ತರಲಾಗುತ್ತಿದೆ.
​ಪೌರಾಯುಕ್ತರಿಗೆ ಬೆದರಿಕೆ ಹಾಕಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಗರಂ ಆಗಿತ್ತು. ಕೆಪಿಸಿಸಿ ಶಿಸ್ತು ಸಮಿತಿಯು ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ಈ ನಡುವೆ ತನ್ನ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ರಾಜೀವ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜೀವ ಗೌಡ ಅವರಿಗೆ ಪಕ್ಷ ಹಾಗೂ ಕೋರ್ಟ್ ಕಡೆಯಿಂದ ಹಿನ್ನಡೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು