ಇತ್ತೀಚಿನ ಸುದ್ದಿ
ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್
26/01/2026, 20:14
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka.com
ಸಿದ್ದರಾಮಯ್ಯನವರ ಸರ್ಕಾರ ಕೊಡಗಿನ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆಗೊಳಿಸಲಾಗಿದ್ದು ಪ್ರಮುಖವಾಗಿ ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿಸಿದಂತೆ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಹೇಳಿದರು.
ಅವರು ಇಂದು ಗಣರಾಜ್ಯೋತ್ಸವ ಸಂದರ್ಭ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಡಗಿನ ಅಭಿವೃದ್ಧಿಗೆ ನಮ್ಮ ಸರ್ಕಾರ ಸಂಪೂರ್ಣವಾಗಿ ಸಹಕಾರ ನೀಡುತ್ತಿದೆ ಎಂದು ಅವರು ಹೇಳಿದರು.













