8:58 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್‌. ರೈಗೆ ಡಾಕ್ಟರೇಟ್‌

26/01/2026, 20:53

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್‌ ವಿಭಾಗದ ಮುಖ್ಯಸ್ಥೆ ಭಾರತಿ ಎಸ್‌ ರೈ ಅವರು ಸಲ್ಲಿಸಿದ “ರಿಇನ್ವೆಂಟಿಂಗ್‌ ಕರ್ಣ: ಅನ್‌ ಎಕ್ಸಪ್ಲೋರೇಷನ್‌ ಆಫ್‌ ಸೆಲೆಕ್ಟ್‌ ರಿಟೆಲ್ಲಿಂಗ್ಸ್‌ ಆಫ್‌ ದ ಮಹಾಭಾರತ”[REINVENTING KARNA: AN EXPLORATION OF SELECT RETELLINGS OF THE MAHABHARATA] ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯವು ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿದೆ.
ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಶೋಧನಾ ಪ್ರಾಧ್ಯಾಪಕಿ ಡಾ. ಮಂಜುಳಾ ಕೆ.ಟಿ ಅವರು ಮಾರ್ಗದರ್ಶನ ನೀಡಿದ್ದರು. ಸಂಶೋಧನೆ ಅವಧಿಯಲ್ಲಿ ಭಾರತಿ ರೈ ಅವರ ಹನ್ನೆರಡು ಸಂಶೋಧನಾ ಲೇಖನಗಳು ರಾಷ್ಟ್ರೀಯ ಹಾಗೂ ಅಂತ ರಾಷ್ಟ್ರೀಯ ಪೀರ್-ರಿವ್ಯೂಡ್ ಸಂಶೋಧನಾ ನಿಯತಕಾಲಿಕಗಳಲ್ಲಿ(Peer Reviewed) ಪ್ರಕಟಿಸಲ್ಪಟ್ಟಿವೆ ಮತ್ತು 3 ರಾಷ್ಟ್ರಮಟ್ಟದ ಸಮ್ಮೇಳನಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುತ್ತಾರೆ. ಇಂಗ್ಲಿಷ್ ಸಾಹಿತ್ಯದಲ್ಲಿ ಎಂಎ, ಎಂ., ಫಿಲ್ ಹಾಗೂ ಕಾನೂನು ಪದವೀಧರೆಯಾಗಿರುವ ಇವರು ಪ್ರಸ್ತುತ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್‌ ವಿಭಾಗದ ಮುಖ್ಯಸ್ಥರಾಗಿ ಹಾಗೂ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಸಂಚಾಲಕರಾದ ವಂ.ಲಾರೆನ್ಸ್ ಮಸ್ಕರೇನ್ಹಸ್ ಹಾಗೂ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೆರೊರವರು ಅಭಿನಂದಿಸಿದ್ದಾರೆ.
ಡಾ. ಭಾರತಿ ರೈ ಅವರು, ದಿI ಬೆಳಿಯೂರುಗುತ್ತು ಬಾಲಕೃಷ್ಣ ರೈ ಮತ್ತು ದಿI ಸಣಂಗಳ ಲಲಿತಾ ಬಿ.ಬಿ. ರೈ ಇವರ ಪುತ್ರಿ ಹಾಗೂ ಉದ್ಯಮಿ ಬೇಲ್ಯ ಸನತ್ ಕುಮಾರ್ ರೈ ಅವರ ಪತ್ನಿ.
ಫಿಲೋಮಿನಾ ಕಾಲೇಜಿನಲ್ಲಿ 24 ವರ್ಷಗಳ ಸೇವೆಯನ್ನು ಪೂರೈಸಿರುವ ಡಾ. ಭಾರತಿ ರೈ ಅವರು ತಮ್ಮ ಶೈಕ್ಷಣಿಕ ಸೇವೆಗಾಗಿ ಪುತ್ತೂರು ತಾಲೂಕು ಬಂಟರ ಸಂಘದ 2022ರ ಅಶ್ವಿನಿ ಬೆಸ್ಟ್ ಟೀಚರ್ ಗೋಲ್ಡ್ ಅವಾರ್ಡ್ ಗೆ ಭಾಜನರಾಗಿರುತ್ತಾರೆ. ಸಂಸ್ಥೆಯಲ್ಲಿ 14 ವರ್ಷಗಳ ಕಾಲ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾಗಿ, 5 ವರ್ಷಗಳ ಕಾಲ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ, 3 ವರ್ಷಗಳ ಕಾಲ ಮಹಿಳಾ ಘಟಕದ ನಿರ್ದೇಶಕರಾಗಿ, ಕಾಲೇಜಿನ ವಾರ್ಷಿಕ ಸಂಚಿಕೆ “ಫಿಲೋಪ್ರಭ “ಹಾಗೂ “ಪರ್ಲ್ ಬಹುಶಿಸ್ತೀಯ ಸಂಶೋಧನಾ ನಿಯತಕಾಲಿಕೆ” ಯ ಸಹಸಂಪಾದಕಿಯಾಗಿ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು