ಇತ್ತೀಚಿನ ಸುದ್ದಿ
Chitradurga | ಪರಶುರಾಮಪುರ: ಕಾಂಗ್ರೆಸ್ ಸೇವಾದಳ ಉಪಾಧ್ಯಕ್ಷರಾಗಿ ಜಿ. ಮುಸ್ತಾಫ ನೇಮಕ
28/01/2026, 19:32
ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭೆ ಕ್ಷೇತ್ರದ ಪರಶುರಾಮಪುರ ಹೋಬಳಿ ಕಾಂಗ್ರೆಸ್ ಸೇವಾದಳದ ಉಪಾಧ್ಯಕ್ಷರಾಗಿ ಜಿ. ಮುಸ್ತಾಫ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ಚಿತ್ರದುರ್ಗ ಜಿಲ್ಲಾಧ್ಯಕ್ಷರ ಹಾಗೂ ಬ್ಲಾಕ್ ಅಧ್ಯಕ್ಷರ ಅನುಮೋದನೆ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕ ಮಾಡಲಾಗಿದೆ.

ಪಕ್ಷದ ತತ್ವ ಸಿದ್ದಾಂತದ ಮೇಲೆ ಮುಸ್ತಾಫ ಅವರು ಅಚಲ ನಂಬಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.












