ಇತ್ತೀಚಿನ ಸುದ್ದಿ
Madikeri | ಬೊಲೆರೋ ಡಿಕ್ಕಿಯಾಗಿ ಪಾದಚಾರಿ ಮಹಿಳೆ ದುರ್ಮರಣ: ಚಾಲಕನ ಬಂಧನ
29/01/2026, 13:06
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಬೊಲೆರೋ ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಮೃತಪಟ್ಟ ಘಟನೆ ಹೆಬ್ಬಾಲೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಕೊಣನೂರು ಕಡೆಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಬೊಲೆರೋ (ಕೆ.ಎ.13.ಎನ್.8637) ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮಹಿಳೆ
ಮಂಜುಳಾ (50) ಎಂಬವರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜುಳಾ ಅವರನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ರವಾನಿಸಿದರೂ ಮೃತಪಟ್ಟಿದ್ದಾರೆ. ಮೃತ ಮಹಿಳೆ ಹೆಬ್ಬಾಲೆಯ ನಿವೃತ್ತ ಶಿಕ್ಷಕ ಪಾಲಾಕ್ಷ ಎಂಬವರ ಪತ್ನಿ.
ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ಸಂಚಾರ ಪೊಲೀಸ್ ಠಾಣಾಧಿಕಾರಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿ ಜೀಪ್ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.












