ಇತ್ತೀಚಿನ ಸುದ್ದಿ
Batkala | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯ ಸಮಿತಿ ಸದಸ್ಯರಾಗಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಆಯ್ಕೆ
29/01/2026, 21:46
ಭಟ್ಕಳ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾಗಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಆಯ್ಕೆಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದ ಸಂಘಟನೆಯ ರಾಜ್ಯಮಟ್ಟದ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ನಡೆದ ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು ಈ ನೇಮಕ ಮಾಡಿ ಆದೇಶ ಪತ್ರ ಹಸ್ತಾಂತರಿಸಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಲಕ್ಷ್ಮಣ್ ರಾವ್ ಜಗಳೂರು, ಡಾ. ಎಸ್. ಎಸ್. ಪಾಟೀಲ್ ಹುಬ್ಬಳ್ಳಿ, ಡಾ. ಜಾನ್ಸನ್ ಗೋಡೆ, ಹನುಮಂತಪ್ಪ,ಇರ್ಫಾನ್ ಬಿಳಗಿ,
ಉಪಸ್ಥಿತರಿದ್ದರು.












