3:50 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ

30/01/2026, 21:20

ಬೆಂಗಳೂರು(reporterkarnataka.com): ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ಮೊದಲ ಚಿತ್ರ “ಫೈರ್ ಫ್ಲೈ” 17 ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನವಾಯಿತು. ವಂಶಿಕೃಷ್ಣ ಶ್ರೀನಿವಾಸ್ ನಿರ್ದೇಶನದಲ್ಲಿ ಆನಂದ್ ನೀನಾಸಂ, ರಚನಾ ಇಂದರ್, ಅಚ್ಯುತ್ ಕುಮಾರ್,‌ ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಎಲ್ಲರ ಮೆಚ್ಚುಗೆ ಪಡೆಯಿತು.

ಪ್ರದರ್ಶನದ ನಂತರ ಮಾತನಾಡಿದ ನಿರ್ಮಾಪಕಿ ನಿವೇದಿತ ಶಿವರಾಜಕುಮಾರ್,17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಿದ್ದು ಬಹಳ ಖುಷಿಯಾಗಿದೆ. ಆಯೋಜಕರಿಗೆ ಧನ್ಯವಾದ ಎಂದರು.
ಬೆಂಗಳೂರು ಚಿತ್ರೋತ್ಸವದಲ್ಲಿ ಕನ್ನಡಿಗರ ಜೊತೆಗೆ ಹೊರ ರಾಜ್ಯ ಹಾಗೂ ದೇಶದವರು ಸಹ ನಮ್ಮ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದು ಬಹಳ ಸಂತೋಷವಾಗಿದೆ. ನಮ್ಮ ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಲಭ್ಯವಿದೆ ಎಂದು ನಿರ್ದೇಶಕ ವಂಶಿಕೃಷ್ಣ ಶ್ರೀನಿವಾಸ್ ತಿಳಿಸಿದರು. ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು