6:16 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್ ದರವನ್ನು ಶೇ. 5ರಿಂದ 2ಕ್ಕೆ ಇಳಿಕೆ

01/02/2026, 17:59

ನವದೆಹಲಿ(reporterkarnataka.com): ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ನಲ್ಲಿ ಆದಾಯ ತೆರಿಗೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ವರ್ಷದ ಪರಿಷ್ಕರಣೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಆದಾಯ ತೆರಿಗೆ ಪಾವತಿದಾರರ ಪರಿಷ್ಕೃತ ತೆರಿಗೆ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 31ರಿಂದ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಅಲ್ಲದೆ, ಆದಾಯ ತೆರಿಗೆ ಪಾವತಿ ವಿಳಂಬಕ್ಕೆ ಶೇ 10ರಷ್ಟು ದಂಡ ವಿಧಿಸಲು ನಿರ್ಧರಿಸಲಾಗಿದ್ದು, ಶಿಕ್ಷೆ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಸಣ್ಣ ತೆರಿಗೆದಾರರಿಗೆ ನಿಯಮ ಆಧಾರಿತ ಸ್ವಯಂಚಾಲಿತ ತೆರಿಗೆ ಸಲ್ಲಿಕೆ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ಆದಾಯ ತೆರಿಗೆ ಸ್ಲ್ಯಾಬ್‌ಗಳು ಇಂತಿವೆ:
ವಿದೇಶ ಪ್ರವಾಸ ಮಾಡುವವರಿಗೆ ನಿರ್ಮಲಾ ಶುಭ ಸುದ್ದಿ ಕೊಟ್ಟಿದ್ದಾರೆ. ವಿದೇಶ ಪ್ರವಾಸಗಳ ಮೇಲಿನ ಟಿಸಿಎಸ್ ಶೇ 2ಕ್ಕೆ ಇಳಿಕೆ ಮಾಡಿದ್ದಾರೆ. ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್ ದರವನ್ನು ಶೇ 5 ರಿಂದ ಶೇ 2ಕ್ಕೆ ಇಳಿಸಲಾಗಿದೆ.
ಮೋಟಾರು ಅಪಘಾತ ಸಂದರ್ಭಗಳಲ್ಲಿ ವಿಮೆ ಕ್ಲೇಮುಗಳಿಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
ಭಾರತದಲ್ಲಿ ವಾಸಿಸುವ ವಿದೇಶಿ ಪ್ರಜೆಗಳಿಗೆ ಐದು ವರ್ಷಗಳವರೆಗೆ ಭಾರತೇತರ ಗಳಿಕೆಯ ಮೇಲೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
ದೇಶದಲ್ಲಿ ಡೇಟಾ ಸೆಂಟರ್‌ಗಳನ್ನು ಬಳಸಿಕೊಂಡು ವಿಶ್ವದಾದ್ಯಂತ ಗ್ರಾಹಕರಿಗೆ ಕ್ಲೌಡ್ ಸೇವೆಗಳನ್ನು ಒದಗಿಸುವ ವಿದೇಶಿ ಕಂಪನಿಗಳಿಗೆ 2047ರವರೆಗೆ ತೆರಿಗೆ ರಜೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೆಲವು ಷರತ್ತುಗಳಿಗೆ ಒಳಪಟ್ಟು ಸಂಬಂಧಪಟ್ಟ ಘಟಕಗಳಿಗೆ ತೆರಿಗೆ ರಜೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಮೋಟಾರು ವಾಹನ ಅಪಘಾತ ಪರಿಹಾರದ ಮೇಲೆ ಸಿಗುವ ಬಡ್ಡಿಗೆ ಇನ್ಮುಂದೆ ಆದಾಯ ತೆರಿಗೆ ವಿನಾಯಿತಿ ಸಿಗಲಿದೆ ಮತ್ತು ಟಿಡಿಎಸ್ ಇರುವುದಿಲ್ಲ ಎಂದೂ ಹಣಕಾಸು ಸಚಿವರು ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು