1:29 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

01/02/2026, 18:57

ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ಬಜೆಟ್‌ನಿಂದ ಕರ್ನಾಟಕಕ್ಕೆ ಯಾವುದೇ ಅನುಕೂಲವಾಗಿಲ್ಲ. ಬೆಂಗಳೂರಿಗೆ ಯಾವ ಹೈಸ್ಪೀಡ್ ರೈಲೂ ಬರಲ್ಲ. ರಾಜ್ಯಕ್ಕೆ ಬಜೆಟ್‌ನಲ್ಲಿ ಯಾವುದೇ ಕೊಡುಗೆ ನೀಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮನರೇಗಾ ಹೆಸರಲ್ಲಿ ನಮ್ಮ ಕ್ಷೇತ್ರದಲ್ಲೇ ಮ್ಯಾರಥಾನ್ ಮಾಡಿದ್ದೇವೆ. ಮನರೇಗಾ ಹೆಸರು ಬದಲಾವಣೆ ಹಿಂಪಡೆದು, ಹಿಂದೆ ಇದ್ದಿದ್ದನ್ನೇ ಮುಂದುವರೆಸಲಿ ಎಂದರು.
ವಿಬಿ ಜಿ ರಾಮ್ ಜಿ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದ ಅನುಪಾತ 60:40 ಯಾವುದೇ ಕಾರಣಕ್ಕೂ ನಡೆಯಲ್ಲ. ಯಾವ ಸರ್ಕಾರವೂ ಬಂಡವಾಳ ಹಾಕಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೃಷಿ ವಲಯದಲ್ಲಿ ಎಐ ಬಳಕೆಗೆ ಒತ್ತು ನೀಡಿರುವ ಕುರಿತ ಪ್ರಶ್ನೆಗೆ, ಮನರೇಗಾಗೂ ಕೂಡಾ ಎಐ ಬಳಕೆ‌ ಮಾಡಿ ಕೂಲಿ ತೀರ್ಮಾನ ಮಾಡ್ತೀವಿ ಎಂದಿದ್ದರು.
ವ್ಯವಸಾಯದ ಕಾಲದಲ್ಲಿ ಕೂಲಿ ಕೊಡಲಿಲ್ಲ ಇವರು. ಎಐ ನಿಂದ ವ್ಯವಸಾಯಕ್ಕೆ ಪ್ರಯೋಜನವಿಲ್ಲ ಎಂದು ಟೀಕಿಸಿದರು.
ರೇಷ್ಮೆ ಬೆಳೆಗೆ ಉತ್ತೇಜನ ಕೊಡಬೇಕು. ಸಕ್ಕರೆ ಬೆಲೆ ಯಾಕೆ ಏರಿಕೆ ಮಾಡ್ತಿಲ್ಲ? ಇದರಿಂದ ರೈತರಿಗೆ ನಷ್ಟ ಆಗ್ತಿದೆ. ಸಕ್ಕರೆ ಬೆಲೆ ಏರಿಸದಿದ್ದರೆ ಸಹಕಾರ ಕ್ಷೇತ್ರಗಳು ಮುಚ್ಚುವ ಹಂತಕ್ಕೆ ಬರುತ್ತವೆ.‌ನಮ್ಮ ಭಾಗದ ಐದು ಜಿಲ್ಲೆಯಲ್ಲಿ ಕಬ್ಬು ಬೆಳೆಯುತ್ತಾರೆ. ರೈತರಿಗೆ ಕೇಂದ್ರ ಸರ್ಕಾರ ಅವರಿಗೆ ಯಾವ ಸಹಾಯ ಮಾಡಿದೆ? ಎಂದು ಪ್ರಶ್ನಿಸಿದರು.
ಬೆಂಗಳೂರಿಗೆ ಹೈಸ್ಪೀಡ್ ರೈಲು ಘೋಷಣೆ ಕುರಿತು ಪ್ರತಿಕ್ರಿಯಿಸಿ, ಯಾವ್ ಹೈ ಸ್ಪೀಡ್ ರೈಲು? ಯಾವ ಸ್ಪೀಡ್ ರೈಲೂ ಬರಲ್ಲ. ಆ ಯೋಜನೆಯ ಕೇಂದ್ರ ಮತ್ತು ರಾಜ್ಯಸ ಅನುಪಾತ 50:50 ಅಡಿ ಆಗಲ್ಲ. ಬೇಕಿದ್ರೆ 90:10 ಕೊಡಲಿ. ಆಗ ನಾವು ಶೇ 10ರಷ್ಟು ಕೊಡುತ್ತೇವೆ. ಬೇರೆ ರಾಜ್ಯಗಳಿಗೆ ಅವರೇ ಮಾಡಿಕೊಟ್ಟಿದ್ದಾರೆ. ನಮ್ಮ ರಾಜ್ಯಕ್ಕೂ ಶೇ‌ 90ರಷ್ಟು ಮಾಡಲಿ ಎಂದರು
ಬಜೆಟ್ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಕೊಡುಗೆಯ ನಿರೀಕ್ಷೆ ಇತ್ತು. ಪ್ರಧಾನಿ‌ ಮೋದಿ ಅವರೇ ನಗರವನ್ನು ಗ್ಲೋಬಲ್ ಸಿಟಿ ಅಂತ ಹೇಳಿದ್ರು. ಆ ಗ್ಲೋಬಲ್ ಸಿಟಿಗೆ ಏನು ಒತ್ತು ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು