2:31 PM Monday2 - February 2026
ಬ್ರೇಕಿಂಗ್ ನ್ಯೂಸ್
ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ…

ಇತ್ತೀಚಿನ ಸುದ್ದಿ

ಪುತ್ತೂರು: ರಾಜ್ಯದಲ್ಲೇ 3ನೇ ಅತೀ ಎತ್ತರದ ರಾಷ್ಟ್ರಧ್ವಜ ಸ್ತಂಭ ಸ್ಥಾಪನೆ; 80 ಮೀಟ‌ರ್ ಎತ್ತರ

02/02/2026, 14:07

ಪುತ್ತೂರು(reporterkarnataka.com): ಪುತ್ತೂರು ಮಹಾಲಿಂಗೇಶ್ವರ ದೇವಳದ ಎದುರಿನ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಬಳಿ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೂರನೇ ಅತಿ ದೊಡ್ಡ ರಾಷ್ಟ್ರ ಧ್ವಜಸ್ತಂಭದಲ್ಲಿ ಭಾನುವಾರ ಸಂಜೆ ಪರೀಕ್ಷಾರ್ಥವಾಗಿ ಕೆಲ ಕಾಲ ತ್ರಿವರ್ಣ ಧ್ವಜ ಹಾರಾಡಿತು.
80 ಮೀಟ‌ರ್ ಎತ್ತರದ ಬೃಹತ್ ರಾಷ್ಟ್ರ ಧ್ವಜಕಂಬ ಅಳವಡಿಕೆ ಕಾರ್ಯ ಭಾನುವಾರ ಬೆಳಿಗ್ಗೆ ಆರಂಭಗೊಂಡಿತು. ಬೃಹತ್ ಕ್ರೇನ್ ಮೂಲಕ ಧ್ವಜಸ್ತಂಭವನ್ನು ಅಳವಡಿಸಿ ಸಂಜೆ ಹೊತ್ತಿಗೆ ಕೆಲ ಕಾಲ ಪರೀಕ್ಷಾರ್ಥವಾಗಿ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಹಾರಿಸಿ,ಬಳಿಕ ಇಳಿಸಲಾಯಿತು. ಧ್ವಜ ಸ್ತಂಭ ಅಳವಡಿಕೆಯ ವೇಳೆ ಶಾಸಕ ಅಶೋಕ್‌ಕುಮಾ‌ರ್ ರೈ ಮತ್ತಿತರರು ಉಪಸ್ಥಿತರಿದ್ದರು. ಈ ಬೃಹತ್ ಧ್ವಜ ಸ್ತಂಭ ವನ್ನು ಅಳವಡಿಸುವ ವೇಳೆ ನೂರಾರು ಮಂದಿ ಕುತೂಹಲದಿಂದ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈ, ಪುತ್ತೂರಿನಲ್ಲಿ ಅತ್ಯಂತ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂಬುದು ನಮ್ಮ ಕನಸಾಗಿತ್ತು. ಪುತ್ತೂರಿನಲ್ಲಿ ದೇಶ ಪ್ರೇಮ ಏನು ಎಂಬುವುದನ್ನು ತೋರಿಸುತ್ತೇವೆ ಎಂದು 6 ತಿಂಗಳ ಹಿಂದೆಯೇ ಹೇಳಿದ್ದೆ. ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಇಷ್ಟು ಎತ್ತರದಲ್ಲಿ ರಾಷ್ಟ್ರ ಧ್ವಜ ಹಾರಿಸಿದ ಯಾವುದೇ ತಾಲ್ಲೂಕು ರಾಜ್ಯದಲ್ಲಿ ಇಲ್ಲ.
ತಾಲ್ಲೂಕು ಮಟ್ಟದಲ್ಲಿ ರಾಜ್ಯದ ಅತ್ಯಂತ ಎತ್ತರದ 3ನೇ ರಾಷ್ಟ್ರಧ್ವಜ ಸ್ತಂಭ ಇರುವುದು ಪುತ್ತೂರಿನಲ್ಲಿ ಎಂದು ಹೇಳಲು ಇಚ್ಛಿಸುವೆ ಎಂದರು.
ವಾರದೊಳಗೆ ಲೈಟಿಂಗ್ ವ್ಯವಸ್ಥೆ ಮಾಡಿ ರಾಷ್ಟ್ರಧ್ವಜ ಹಾರಿಸುವ ಕೆಲಸ ಮಾಡಲಾಗುವುದು. 2400 ಚದರ ಅಡಿ ಅಗಲದ ರಾಷ್ಟ್ರಧ್ವಜ ಹಾರಾಡಲಿದೆ. ಒಂದು ಧ್ವಜಕ್ಕೆ ₹60 ಸಾವಿರ ವೆಚ್ಚವಿದ್ದು, ವರ್ಷಕ್ಕೆ 3 ಬಾರಿ ಧ್ವಜವನ್ನು ಬದಲಾಯಿಸಬೇಕಾಗುತ್ತದೆ. ಮೈಕಲ್ಲಿ ಭಾಷಣ ಮಾಡಿದ ಮಾತ್ರಕ್ಕೆ ದೇಶ ಪ್ರೇಮ ಬರುವುದಿಲ್ಲ. ಇಂತಹ ವ್ಯವಸ್ಥೆಗಳನ್ನು ಮಾಡಿದರೆ ಮಾತ್ರ ದೇಶ ಪ್ರೇಮ ಬೆಳೆಸಬಹುದಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು