4:35 AM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್

02/02/2026, 18:56

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಕೇರಳ–ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆಯಲ್ಲಿ ದರೋಡೆಕೋರರ ಹಾವಳಿ ಮಿತಿಮೀರಿದ್ದು, ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವಿಶೇಷವಾಗಿ ಚಿನ್ನದ ಉದ್ಯಮಿಗಳನ್ನೇ ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿರುವ ‘ಕೇರಳದ ಮಲ್ಲು ಗ್ಯಾಂಗ್’ ಮಟ್ಟಹಾಕಲು ಕರ್ನಾಟಕ ಪೊಲೀಸರು ಈಗ ಹೊಸ ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಹದ್ದಿನ ಕಣ್ಣಿಟ್ಟಿದ್ದಾರೆ.

*ಏನಿದು ಪ್ರಕರಣ?:* ಕೇರಳದ ಚಿನ್ನದ ಉದ್ಯಮಿಗಳಾದ ಜಮ್ಸಿದ್ ಮತ್ತು ಫೈಸಲ್ ಎಂಬುವವರು ಕರ್ನಾಟಕದಲ್ಲಿ ಚಿನ್ನ ಮಾರಾಟ ಮಾಡಿ 10 ಲಕ್ಷ ರೂಪಾಯಿ ನಗದಿನೊಂದಿಗೆ ಕೇರಳಕ್ಕೆ ಮರಳುತ್ತಿದ್ದರು. ಈ ವೇಳೆ ಗುಂಡ್ಲುಪೇಟೆ ಗಡಿ ಸಮೀಪದ ಕಾಡಿನ ಹಾದಿಯಲ್ಲಿ ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ತಂಡ, ಉದ್ಯಮಿಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ 10 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದೆ.
ದರೋಡೆ ನಡೆದ ಸ್ಥಳದಲ್ಲಿ ಮೊಬೈಲ್ ನೆಟ್‌ ವರ್ಕ್ ಸಿಗದಿರುವುದನ್ನೇ ಬಂಡವಾಳ ಮಾಡಿಕೊಂಡ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ. ಇನ್ನು ಈ ಘಟನೆ ಜನವರಿ 10ರಂದು ನಡೆದಿದ್ದರೂ, ಸಂತ್ರಸ್ತರು ಜನವರಿ 27ರಂದು ತಡವಾಗಿ ದೂರು ನೀಡಿದ್ದಾರೆ. ಈ ವಿಳಂಬವು ಪೊಲೀಸರಲ್ಲಿ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದ್ದು, ದರೋಡೆಕೋರರು ಉದ್ಯಮಿಗಳಿಗೆ ಪರಿಚಿತರೇ ಎಂಬ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ.

*ಪೊಲೀಸರ ಬಿಗಿ ಕ್ರಮ:* ಈ ದರೋಡೆ ಗ್ಯಾಂಗ್‌ ಗಳ ಉಪಟಳಕ್ಕೆ ಬ್ರೇಕ್ ಹಾಕಲು ಪೊಲೀಸರು ಈಗ ಕಾರ್ಯಪ್ರವೃತ್ತರಾಗಿದ್ದಾರೆ.

*ಹೊಸ ಚೆಕ್ ಪೋಸ್ಟ್:* ಮದ್ದೂರು ಚೆಕ್ ಪೋಸ್ಟ್ ಜೊತೆಗೆ ಮತ್ತೊಂದು ಹೊಸ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಪ್ರತಿಯೊಂದು ವಾಹನವನ್ನೂ ತಪಾಸಣೆ ಮಾಡಲಾಗುತ್ತಿದೆ.
ಹದ್ದಿನ ಕಣ್ಣು: ಕೇರಳದಿಂದ ಕರ್ನಾಟಕಕ್ಕೆ ಮತ್ತು ಕರ್ನಾಟಕದಿಂದ ಕೇರಳಕ್ಕೆ ಸಂಚರಿಸುವ ಅನುಮಾನಾಸ್ಪದ ವಾಹನಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

*ಹಳೆಯ ಕೇಸ್‌ ಗಳ ತನಿಖೆ:* ಕಳೆದ ಎರಡು ತಿಂಗಳ ಹಿಂದೆ ನಡೆದ 1.25 ಕೆಜಿ ಚಿನ್ನದ ದರೋಡೆ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಕಿಂಗ್‌ ಪಿನ್ ಪತ್ತೆಗೆ ಶೋಧ ಮುಂದುವರಿದಿದೆ.
ಗಡಿ ಭಾಗದಲ್ಲಿ ಉದ್ಯಮಿಗಳ ಸುರಕ್ಷತೆಗಾಗಿ ಪೊಲೀಸರು ಅಲರ್ಟ್ ಆಗಿದ್ದು, ಮಲ್ಲು ಗ್ಯಾಂಗ್‌ನ ಬಾಲ ಕತ್ತರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು