1:48 PM Tuesday3 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ಬಂಟ್ವಾಳ: ಸರಕಾರಿ ನೌಕರರ ಸಂಘ ಮಹಾಸಭೆ: ಸಾಧಕರಿಗೆ ಅಭಿನಂದನೆ, ನಿವೃತ್ತರಿಗೆ‌ ಸನ್ಮಾನ

03/02/2026, 12:57

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಉದ್ಘಾಟಿಸಿ ಮಾತನಾಡುತ್ತಾ ಇಂದು ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ 4 ಮಂದಿಯ ಕರ್ತವ್ಯವನ್ನು ಒಬ್ಬನೇ ನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ನೌಕರರು ಮಾನಸಿಕ ಹಾಗೂ ದೈಹಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂದರು.
ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರಕಾರಿ ನೌಕರರ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿದ್ದೇನೆ ಎಂದರು.
ಮುಖ್ಯ ಅತಿಥಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಮಾತನಾಡಿ ಸಂಘಟನಾ ಶಕ್ತಿ ಅಗತ್ಯವೆಂದರು.
ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಕ್ಕೆ ಮಾದರಿಯಾಗುವಂತಹ ಸಂಘಟನೆಗೆ ಉಮಾನಾಥ ರೈಯವರು ಮೇಲ್ಪಂಕ್ತಿಯನ್ನು ಹಾಕಿದ್ದು ಅದೇ ದಾರಿಯಲ್ಲಿ ಸಂಘಟನೆಯನ್ನು ಮುನ್ನಡೆಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಸರಕಾರಿ ನೌಕರರ ಮಕ್ಕಳು ಹಾಗೂ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ನೌಕರರ ಮಕ್ಕಳನ್ನು ಹಾಗೂ ಪ್ರಶಸ್ತಿ ಪುರಸ್ಕೃತ ಸರಕಾರಿ ನೌಕರರು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೌಕರರು, ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸರಕಾರಿ ನೌಕರರನ್ನು ಗೌರವಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಉಮಾನಾಥ ರೈ ಮೇರಾವು ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಪಿಂಚಣಿದಾರರ ಸಂಘದ ಅಧ್ಯಕ್ಷ ಪಿ.ಲೋಕನಾಥ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.
ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ, ಸಂಘದ ಗೌರವಾಧ್ಯಕ್ಷ ಶಮಂತ್ ಕುಮಾರ್, ಹಿರಿಯ ಉಪಾಧ್ಯಕ್ಷ ನಂದನ್ ಶೆಣೈ, ಉಪಾಧ್ಯಕ್ಷ ಸೀತಾರಾಮ ಪೂಜಾರಿ, ನಿವೃತ್ತ ಉಪನ್ಯಾಸಕ ಅಂಬಾಪ್ರಸಾದ್, ವೇದಿಕೆಯಲ್ಲಿದ್ದರು. ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಸ್ವಾಗತಿಸಿದರು. ಖಜಾಂಚಿ ಬಸಯ್ಯ ಅಲಿಮಟ್ಟಿ ವಂದಿಸಿದರು. ಶಿಕ್ಷಕ ಜಯರಾಂ, ನಿರೂಪಿಸಿದರು. ಜನಾರ್ದನ, ನವೀನ್ ಪಿ.ಎಸ್. ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು