5:28 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್

08/09/2021, 19:15

ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. 

ನಾನು ಡ್ರಗ್ಸ್ ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಆಗಿರೋದ್ರಿಂದ ನಾವು ಪಾರ್ಟಿ ಮಾಡಲು ಹೇಗೆ ಸಾಧ್ಯ ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಎಂದರು.

ನನ್ನ ಲೈಫ್ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ. ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ, ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವರಿಗೆ ಒಳ್ಳೆಯದಾಗಲಿ ಎಂದು ದುಃಖ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು