12:18 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜಾತಕ ನೋಡಿವ ನೆಪ: ಯುವತಿ ಮೇಲೆ ಅರ್ಚಕನಿಂದ ನಿರಂತರ ಅತ್ಯಾಚಾರ; ದೂರು ದಾಖಲು

03/02/2026, 21:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮದುವೆ ಜಾತಕ ತೋರಿಸುವ ನೆಪದಲ್ಲಿ ದಲಿತ ಸಮುದಾಯದ ಯುವತಿಗೆ ದೇವಾಲಯದ ಅರ್ಚಕ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ.
23 ವರ್ಷದ ದಲಿತ ಸಮುದಾಯದ ಯುವತಿ ನೀಡಿರುವ ದೂರಿನ ಪ್ರಕಾರ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಇದೆ.
2025ರ ನವೆಂಬರ್ 23 ರಿಂದ 2026ರ ಫೆಬ್ರವರಿ 2ರವರೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಫೆಬ್ರವರಿ 2, 2026ರಂದು ಮಧ್ಯಾಹ್ನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು